ಪಿಎಂ ಕೇರ್ಸ್ ಫಂಡ್​ಗೆ ರತನ್ ಟಾಟಾ ಟ್ರಸ್ಟಿ, ಸಲಹಾ ಮಂಡಳಿಗೆ ಸುಧಾಮೂರ್ತಿ ನೇಮಕ…

60
firstsuddi

ನವದೆಹಲಿ : ಪಿಎಂ-ಕೇರ್ಸ್ ಫಂಡ್ ಟ್ರಸ್ಟಿಗಳಾಗಿ ಕೈಗಾರಿಕೋದ್ಯಮಿ ರತನ್ ಟಾಟಾ, ಸುಪ್ರೀಂ ಕೋರ್ಟ್ ನ ನಿವೃತ್ತ ನ್ಯಾಯಾಧೀಶ ಕೆಟಿ ಥಾಮಸ್ ಮತ್ತು ಲೋಕಸಭೆಯ ಮಾಜಿ ಉಪ ಸ್ಪೀಕರ್ ಕರಿಯಾ ಮುಂಡಾ ಅವರನ್ನು ನಾಮನಿರ್ದೇಶನ ಮಾಡಲಾಗಿದೆ.

ಪಿಎಂ ಕೇರ್ಸ್ ನಿಧಿಯ ಸಲಹಾ ಮಂಡಳಿಗೆ ಭಾರತದ ಮಾಜಿ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (ಸಿಎಜಿ) ರಾಜೀವ್ ಮೆಹ್ರಿಷಿ, ಇನ್ಫೋಸಿಸ್ ಫೌಂಡೇಶನ್ ನ ಮಾಜಿ ಅಧ್ಯಕ್ಷೆ ಸುಧಾಮೂರ್ತಿ ಮತ್ತು ಇಂಡಿಕಾರ್ಪ್ಸ್ ಮತ್ತು ಪಿರಮಲ್ ಫೌಂಡೇಶನ್ ನ ಮಾಜಿ ಸಿಇಒ ಆನಂದ್ ಶಾ ಅವರನ್ನು ನಾಮನಿರ್ದೇಶನ ಮಾಡಲಾಗಿದೆ.

ನಿನ್ನೆ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಪಿಎಂ ಕೇರ್ಸ್ ಫಂಡ್ ನ ಟ್ರಸ್ಟಿಗಳ ಮಂಡಳಿಯ ಸಭೆಯ ಬಳಿಕ ಈ ನಿರ್ಧಾರವನ್ನು ಪ್ರಕಟಿಸಲಾಗಿದೆ.

ಈ ಬಗ್ಗೆ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಹೊಸ ಟ್ರಸ್ಟಿಗಳು ಮತ್ತು ಸಲಹೆಗಾರರ ಭಾಗವಹಿಸುವಿಕೆಯಿಂದ ಪಿಎಂ ಕೇರ್ಸ್ ಫಂಡ್ ನ ಕಾರ್ಯಚಟುವಟಿಕೆಗಳಿಗೆ ಸಹಾಯವಾಗಲಿದೆ. ಸಾರ್ವಜನಿಕ ಜೀವನದ ಅವರ ಅಪಾರ ಅನುಭವವು ನಿಧಿಯನ್ನು ವಿವಿಧ ಸಾರ್ವಜನಿಕ ಅಗತ್ಯಗಳಿಗೆ ಹೆಚ್ಚು ಸ್ಪಂದಿಸುವಂತೆ ಮಾಡಲಿದೆ ಎಂದು ತಿಳಿಸಿದ್ದಾರೆ.