ಪಿಎಸ್ಐ ನೇಮಕಾತಿ ಅಕ್ರಮ : ಕಿಂಗ್‌ಪಿನ್ ರುದ್ರಗೌಡ ಪಾಟೀಲ್ ಆಪ್ತ ಅರೆಸ್ಟ್…

52
firstsuddi

ಕಲಬುರಗಿ : ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಪ್ರಕರಣದ ಕಿಂಗ್‌ಪಿನ್ ರುದ್ರಗೌಡ ಪಾಟೀಲ್ ನ ಆಪ್ತನನ್ನು ಬಂಧಿಸಿದ್ದಾರೆ.

ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ಪ್ರಕಾಶ್ ಬಂಧಿತ. ರುದ್ರಗೌಡ ಪಾಟೀಲ್ ಮನೆಯಲ್ಲಿ ಪ್ರಕಾಶ್ ಕೆಲಸ ಮಾಡಿಕೊಂಡಿದ್ದನು. ಈತ ರುದ್ರಗೌಡ ಪಾಟೀಲ್ ನ ಸೂಚನೆ ಮೇರೆಗೆ ಪರಿಕ್ಷಾರ್ಥ ಅಭ್ಯರ್ಥಿಗಳಿಂದ ಹಣ ಸಂಗ್ರಹಿಸಿ ರುದ್ರಗೌಡ ಪಾಟೀಲ್ ಗೆ ನೀಡುವುದು. ಅಭ್ಯರ್ಥಿಗಳಿಗೆ ಬ್ಲೂಟೂತ್ ಡಿವೈಸ್ ಮತ್ತು ಎಲೆಕ್ಟ್ರಾನಿಕ್ ಡಿವೈಸ್ ವಿತರಿಸುವ ಕೆಲಸ ಮಾಡುತ್ತಿದ್ದನು ಎಂದು ತಿಳಿದುಬಂದಿದೆ.

ರುದ್ರಗೌಡ ಪಾಟೀಲ್ ವಿಚಾರಣೆ ವೇಳೆ ನೀಡಿದ ಮಾಹಿತಿ ಆಧರಿಸಿ ಪ್ರಕಾಶನನ್ನು ಬಂಧಿಸಲಾಗಿದೆ. ಇದರೊಂದಿಗೆ ಬಂಧಿತರ ಸಂಖ್ಯೆ 33ಕ್ಕೆ ಏರಿಕೆಯಾಗಿದೆ. ಪ್ರಕಾಶನನ್ನು ಬಂಧಿಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ ಅಧಿಕಾರಿಗಳು, 6 ದಿನಗಳ ಕಾಲ ಕಸ್ಟಡಿಗೆ ಪಡೆದುಕೊಂಡಿದ್ದಾರೆ.