ಬೆಂಗಳೂರು : ಪಿಎಸ್‍ಐ ಹುದ್ದೆ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎನ್ನಲಾದ ಪ್ರಕರಣ ಸಂಬಂಧ 545 ಅಭ್ಯರ್ಥಿಗಳ ಪೈಕಿ ಟಾಪರ್ಸ್ ಆಗಿದ್ದ 50 ಅಭ್ಯರ್ಥಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ಸಿಐಡಿ ನೋಟಿಸ್ ಜಾರಿ ಮಾಡಿತ್ತು. ನೋಟಿಸ್ ನೀಡಿದ್ದ 50 ಅಭ್ಯರ್ಥಿಗಳ ಪೈಕಿ 45 ಮಂದಿ ಮಾತ್ರ ತನಿಖಾಧಿಕಾರಿಗಳ ಮುಂದೆ ಹಾಜರಾಗಿದ್ದಾರೆ.
ಡಿವೈಎಸ್ಪಿ ನರಸಿಂಹಮೂರ್ತಿ ಮತ್ತು ಪಿ.ಪ್ರಕಾಶ್ ರಾಥೋಡ್ ನೇತೃತ್ವದಲ್ಲಿ 45 ಅಭ್ಯರ್ಥಿಗಳ ತೀವ್ರ ವಿಚಾರಣೆ ನಡೆಸಲಾಗುತ್ತಿದೆ. ತಮಗೆ ಸಿಕ್ಕಿರುವ ಸಾಕ್ಷಿಗಳನ್ನ ಆಧರಿಸಿ ಸಿಐಡಿ ವಿಚಾರಣೆ ನಡೆಸುತ್ತಿದೆ. ಇನ್ನುಳಿದ ಐವರು ಅಭ್ಯರ್ಥಿಗಳು ಗೈರಾಗಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.










