ಪಿಎಸ್‍ಐ ನೇಮಕಾತಿ ಅಕ್ರಮ ಪ್ರಕರಣ – ನೇಮಕಾತಿ ವಿಭಾಗದ ಎಡಿಜಿಪಿ ವರ್ಗಾವಣೆ!

61
firstsuddi

ಬೆಂಗಳೂರು : ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿ ಅಮೃತ್ ಪೌಲ್ ರನ್ನು ವರ್ಗಾಯಿಸಿ ಸರ್ಕಾರ ಆದೇಶ ಹೊರಡಿಸಿದೆ.

ಅಮೃತ್ ಪೌಲ್ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ವರ್ಗಾವಣೆ ಮಾಡಿರುವ ರಾಜ್ಯ ಸರ್ಕಾರ, ಆಂತರಿಕ ಭದ್ರತಾ ವಿಭಾಗದ ಎಡಿಜಿಪಿಯಾಗಿ ನಿಯೋಜಿಸಿದೆ. ಇನ್ನು ನೇಮಕಾತಿ ವಿಭಾಗದ ನೂತನ ಎಡಿಜಿಪಿ ಆಗಿ ಅಪರಾಧ ಹಾಗೂ ತಾಂತ್ರಿಕ ಸೇವೆ ಎಡಿಜಿಪಿಯಾಗಿರುವ ಆರ್.ಹಿತೇಂದ್ರ ಅವರನ್ನು ನಿಯುಕ್ತಿ ಮಾಡಲಾಗಿದೆ.

ಪಿಎಸ್ಐ ಅಕ್ರಮ ನೇಮಕಾತಿ ಹಗರಣದಲ್ಲಿ ಅಮೃತ್ ಪೌಲ್ ಅವರು ಭಾಗಿಯಾಗಿದ್ದಾರೆ ಎಂದು ಕಾಂಗ್ರೆಸ್ ಆರೋಪ ಮಾಡಿತ್ತು. ಕಾಂಗ್ರೆಸ್ ಆರೋಪದ ಹಿನ್ನೆಲೆಯಲ್ಲಿ ಅಮೃತ್ ಪೌಲ್ ರನ್ನು ವರ್ಗಾವಣೆ ಮಾಡಲಾಗಿದೆ.