ಕಲಬುರಗಿ : 545 ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣ ಸಂಬಂಧ ಸಿಐಡಿ ಪೊಲೀಸರು ಕಲಬುರಗಿಯ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಪತಿ ರಾಜೇಶ್ ಹಾಗರಗಿ ಎಂಬವರನ್ನು ಬಂಧಿಸಿದ್ದಾರೆ. ಸದ್ಯ ರಾಜೇಶ್ ನ್ಯಾಯಾಂಗ ಬಂಧನದಲ್ಲಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ತನಿಖೆಗೆ ಅಸಹಕಾರ, ಆರೋಪಿಗಳ ನಾಪತ್ತೆಗೆ ಬೆಂಬಲ ಆರೋಪದ ಮೇಲೆ ರಾಜೇಶ್ ಹಾಗರಗಿ ಅವರನ್ನು ಬಂಧಿಸಿದ್ದಾರೆ. ಇದುವರೆಗೂ ಎಂಟು ಜನರ ಬಂಧನವಾಗಿದೆ. ಇನ್ನು ಮನೆಯಲ್ಲಿ ಸಿಐಡಿ ಪೊಲೀಸರು ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿರುವ ಮಾಹಿತಿ ಲಭ್ಯವಾಗಿದೆ.
ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಪಿಎಸ್ಐ ನೇಮಕಾತಿ ಅಕ್ರಮಕ್ಕೆ ಕಾರಣವಾದ ಜ್ಞಾನ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷರಾಗಿದ್ದಾರೆ. ಸದ್ಯ ದಿವ್ಯಾ ಹಾಗರಗಿ ನಾಪತ್ತೆಯಾಗಿದ್ದು, ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.










