ಕಲಬುರಗಿ: ತನ್ನ ತಂಗಿಗೆ ಪಿಯುಸಿ ಪರೀಕ್ಷೆಯಲ್ಲಿ ನಕಲು ಮಾಡಲು ಬಿಡದಕ್ಕೆ ಆಕ್ರೋಶಗೊಂಡ ಯುವಕನೊಬ್ಬ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಹಲ್ಲೆ ನಡೆಸಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಕರಜಗಿ ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ.
ರಾಜ್ಯಾದ್ಯಂತ ಪಿಯುಸಿ ಪರೀಕ್ಷೆ ನಡೆಯುತ್ತಿದ್ದು, ಇಂದು ಪರೀಕ್ಷೆಯ ಕೊನೆಯ ದಿನವಾಗಿದೆ. ಪರೀಕ್ಷೆ ನಡೆಯುತ್ತಿದ್ದ ವೇಳೆ ಕೈಲಾಸ್ ಎಂಬಾತ ಕೇಂದ್ರದಲ್ಲಿ ಭದ್ರತಾ ಕರ್ತವ್ಯದಲ್ಲಿದ್ದ ಪೊಲೀಸ್ ಪೇದೆ ಪಂಡಿತ್ ಪಾಂಡ್ರೆ ನಡುವೆ ಮಾತಿನ ಚಕಮಕಿ ನಡೆದಿದೆ. ಮಾತಿಗೆ ಮಾತು ಬೆಳೆದು ನನ್ನ ತಂಗಿಗೆ ನಕಲು ಮಾಡಲು ಬಿಡಲ್ವಾ ಎಂದು ರೊಚ್ಚಿಗೆದ್ದ ಕೈಲಾಸ್, ಪಂಡಿತ್ ಪಾಂಡ್ರೆ ಮೇಲೆ ಹಲ್ಲೆ ಮಾಡಿದ್ದಾನೆ. ಈತನಿಗೆ ಸ್ನೇಹಿತ ಸಮೀರ್ ಕೂಡ ಸಾಥ್ ನೀಡಿದ್ದಾನೆ.
ಸ್ಥಳೀಯರು ಘಟನೆಯ ದೃಶ್ಯವನ್ನು ಮೊಬೈಲ್ ಮೂಲಕ ಸೆರೆ ಹಿಡಿದಿದ್ದಾರೆ. ಪ್ರಕರಣ ಸಂಬಂಧ ಆರೋಪಿ ಕೈಲಾಸ್ ಹಾಗೂ ಆತನ ಸ್ನೇಹಿತ ಸಮೀರ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಈ ಸಂಬಂಧ ಅಫಜಲಪುರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










