ಬೆಂಗಳೂರು: ಪಿಯುಸಿ ಮರು ಮೌಲ್ಯಮಾಪನದ ಫಲಿತಾಂಶ ಪ್ರಕಟಗೊಂಡಿದ್ದು, ಕಲಾ ವಿಭಾಗದಲ್ಲಿ ವಿದ್ಯಾರ್ಥಿ ಕುಶ್ ನಾಯ್ಕ್ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.
ಆ ಮೂಲಕ ಬೆಂಗಳೂರಿನ ಜಯನಗರ ಕಾಲೇಜಿನ ವಿದ್ಯಾರ್ಥಿನಿ ತಬಸುಮ್ ಶೇಖ್ನನ್ನು ಹಿಂದಿಕ್ಕಿದ್ದಾರೆ. ತಬಸುಮ್ ಶೇಖ್ 593 ಅಂಕ ಪಡೆದು ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದರು. ಆದರೆ ಮರು ಮೌಲ್ಯಮಾಪನದಲ್ಲಿ ವಿಜಯನಗರ ಜಿಲ್ಲೆಯ ಕೊಟ್ಟೂರಿನ ವಿಶೇಷ ಚೇತನ ವಿದ್ಯಾರ್ಥಿ ಕುಶ್ ನಾಯ್ಕ್ ದ್ವಿತೀಯ ಪಿಯುಸಿನಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.
ಕುಶ್ ನಾಯ್ಕ್, ಮೌಲ್ಯಮಾಪನ ಫಲಿತಾಂಶದಲ್ಲಿ ಕಲಾ ವಿಭಾಗದ ಐಚ್ಚಿಕ ಕನ್ನಡ ವಿಷಯದಲ್ಲಿ 592 ಅಂಕಗಳಿಂದ 594 ಅಂಕಗಳನ್ನು ಪಡೆದು ರಾಜ್ಯಕ್ಕೆ ಫಸ್ಟ್ ರಾಂಕ್ ಬಂದಿದ್ದಾರೆ.










