ಪುತ್ತೂರು: ಸಹಪಾಠಿಗೆ ಚಾಕುವಿನಿಂದ ಇರಿದ ವಿದ್ಯಾರ್ಥಿ…

71
firstsuddi

ಪುತ್ತೂರು: ಕಾಲೇಜು ವಿದ್ಯಾರ್ಥಿನಿಯೊಬ್ಬಳಿಗೆ ಅದೇ ಕಾಲೇಜಿನ ವಿದ್ಯಾರ್ಥಿಯೋರ್ವ ಚೂರಿಯಿಂದ ಇರಿದು ಗಾಯಗೊಳಿಸಿದ ಘಟನೆ ಪುತ್ತೂರಿನ ಕೊಂಬೆಟ್ಟುವಿನಲ್ಲಿರುವ ಸರಕಾರಿ ಕಾಲೇಜಿನಲ್ಲಿ ಇಂದು ನಡೆದಿರುವುದು ವರದಿಯಾಗಿದೆ.

ಪ್ರೀತಿಸುವುದಾಗಿ ಹೇಳಿದ್ದಕ್ಕೆ ಬಾಲಕಿಗೆ ಬಾಲಕ ಹೇಳಿದ್ದು, ಇದಕ್ಕೆ ಬಾಲಕಿ ಅವಾಚ್ಯವಾಗಿ ನಿಂದಿಸಿದ್ದಾಳೆ ಎನ್ನಲಾಗಿದೆ. ಇದರಿಂದ ಸಿಟ್ಟಿಗೆದ್ದ ಬಾಲಕ ಯುವತಿಗೆ ಇರಿದು ಪರಾರಿಯಾಗಿದ್ದಾನೆ ಎನ್ನಲಾಗಿದೆ.

ಇರಿತದಿಂದ ಕೈಗೆ ಗಾಯಗೊಂಡಿರುವ ವಿದ್ಯಾರ್ಥಿನಿಯನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪುತ್ತೂರು ನಗರ ಠಾಣೆ ಪೊಲೀಸರು ಭೇಟಿ ನೀಡಿದ್ದು, ತನಿಖೆ ನಡೆಸುತ್ತಿದ್ದಾರೆ.