ಬೆಂಗಳೂರು : ಸ್ಯಾಂಡಲ್ ವುಡ್ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರನ್ನು ಕಳೆದುಕೊಂಡು ಕರುನಾಡಿನ ಜನತೆ ಇನ್ನೂ ದುಃಖದಲ್ಲಿದ್ದಾರೆ. ಅದಾಗಲೇ ಅಪ್ಪು ಅಗಲಿ ಇಂದಿಗೆ ಒಂದು ತಿಂಗಳು ಕಳೆದಿದೆ. ಈ ನಡುವೆ ಮಾಡಬೇಕಿರುವ ಪುನೀತ್ ತಿಂಗಳ ಕಾರ್ಯವನ್ನು ದೊಡ್ಮನೆ ಕುಟುಂಬಸ್ಥರು ನೆರವೇರಿಸಿದ್ದಾರೆ.
ಇಂದು ಬೆಳಗ್ಗೆ 10 ಗಂಟೆಗೆ ಪುನೀತ್ ಕುಟುಂಬದವರು ಸಮಾಧಿಗೆ ಪೂಜೆ ಮಾಡಿದ್ದಾರೆ. ಅಶ್ವಿನಿ ಪುನೀತ್ ರಾಜ್ ಕುಮಾರ್, ಗೀತಾ ಶಿವ ರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್ ಸೇರಿದಂತೆ ಡಾ. ರಾಜ್ ಕುಟುಂಬದ ಎಲ್ಲರೂ ಬಂದು ಅಪ್ಪು ಸಮಾಧಿಗೆ ನಮನ ಸಲ್ಲಿಸಿದ್ದಾರೆ. ನಂತರ ಸದಾಶಿವನಗರ ಅಪ್ಪು ನಿವಾಸದಲ್ಲಿ ತಿಂಗಳ ಪೂಜೆ ನಡೆಯಲಿದೆ.
ಪುನೀತ್ ನಿಧನರಾಗಿ ಒಂದು ತಿಂಗಳು ಕಳೆದಿರುವ ಹಿನ್ನೆಲೆಯಲ್ಲಿ ಅಭಿಮಾನಿಗಳೂ ಕೂಡ ಕಂಠೀರವ ಸ್ಟುಡಿಯೋದಲ್ಲಿ ಅಪ್ಪು ಸಮಾಧಿ ದರ್ಶನಕ್ಕೆ ಆಗಮಿಸುತ್ತಿದ್ದಾರೆ.










