ಪುನೀತ್ ರಾಜಕುಮಾರ್ ದೇವಸ್ಥಾನ ಕಟ್ಟಿಸಿದ ಅಭಿಮಾನಿ.

57

ಹಾವೇರಿ: ತಾಲೂಕಿನ ಯಲಗಚ್ಚ ಗ್ರಾಮದಲ್ಲಿ ಗುರುವಾರ ದಿವಂಗತ ಪುನೀತ್ ರಾಜಕುಮಾರ ಹೆಸರಿನಲ್ಲಿ ನಿರ್ಮಾಣ ಆಗಿರುವ ದೇವಸ್ಥಾನದ ಉದ್ಘಾಟನೆ ಇಂದು ನಡೆದಿದೆ. ದೇವಸ್ಥಾನದ ಉದ್ಘಾಟನೆಗೆ ದೊಡ್ಮನೆ ಸೊಸೆ, ಪುನೀತ್  ರಾಜಕುಮಾರ್  ಅವರ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್ ಮತ್ತು ರಾಘವೇಂದ್ರ ರಾಜಕುಮಾರ್ ಅವರ ಪುತ್ರ ಯುವ ರಾಜಕುಮಾರ್ ಅವರು ಆಗಮಿಸಿದ್ದರು. ಕಾರ್ಯಕ್ರಮದಲ್ಲಿ ಪುನೀತ ರಾಜಕುಮಾರ್ ಫೈಬರ್ ಪುತ್ಥಳಿಯನ್ನು ಅಶ್ವಿನಿ ಉದ್ಘಾಟಿಸಿ ಅಭಿಮಾನಿಗಳಿಗೆ ನಾನೆಂದಿಗೂ ಚಿರಋಣಿ ಎಂದು ಪುನೀತ್ ಅಶ್ವಿನಿ ಪುನೀತ್ ರಾಜ್‍ಕುಮಾರ್ ಭಾವುಕರಾದರು.
ಪುನೀತ್ ರಾಜಕುಮಾರ್ ಅಪ್ಪಟ ಅಭಿಮಾನಿ ಯಲಗಚ್ಚ ಗ್ರಾಮದ ಡ್ಯಾನ್ಸ್ ಮಾಸ್ಟರ್ ಪ್ರಕಾಶ ಮೊರಬದ ತಮ್ಮ ಮನೆಯ ಸ್ವಂತ ಜಾಗದಲ್ಲಿ ತಮ್ಮ ನೆಚ್ಚಿನ ನಟ ಪುನೀತ್ ರಾಜಕುಮಾರ್ ದೇವಸ್ಥಾನ ನಿರ್ಮಿಸಿದ್ದಾರೆ. ಪುನೀತ್ ರಾಜಕುಮಾರ ದೇವಸ್ಥಾನದಲ್ಲಿ ಗುರುವಾರದಂದು ಬೆಳಿಗ್ಗೆ ಹನ್ನೊಂದು ಗಂಟೆಗೆ ದೇವಸ್ಥಾನದ ಉದ್ಘಾಟನೆ ಹಾಗೂ ಪುನೀತ್ ರಾಜಕುಮಾರ ಪುತ್ಥಳಿ ಅನಾವರಣ ನಡೆದಿದೆ.
ಅಶ್ವಿನಿ ಪುನೀತ್ ರಾಜಕುಮಾರ್ ಅವರಿಂದ ಅಪ್ಪು ದೇವಸ್ಥಾನ ಹಾಗೂ ಪುನೀತ್ ರಾಜಕುಮಾರ ಪುತ್ಥಳಿ ಅನಾವರಣ ನಡೆದಿದ್ದು. ಪುತ್ಥಳಿ ಅನಾವರಣ ನಂತರ ಅಶ್ವಿನಿ ಅವರು ಅಪ್ಪು ಅಭಿಮಾನಿ ಪ್ರಕಾಶ್ ಅವರ ಮಗಳಿಗೆ ನಾಮಕರಣ ಮಾಡಿದ್ದಾರೆ. ನಂತರ ಶಾಲಾ ಮೈದಾನದಲ್ಲಿ ವಿವಿಧ ಮನರಂಜನಾ ಕಾರ್ಯಕ್ರಮಗಳು ಜರುಗಿದವು.
ಈ ಬಗ್ಗೆ ಮಾತನಾಡಿರುವ ಪ್ರಕಾಶ್, ಉತ್ತರ ಕರ್ನಾಟಕದಲ್ಲಿ ಪುನೀತ್ ರಾಜಕುಮಾರ್ ಅವರ ಬಗ್ಗೆ ಅತ್ಯಂತ ಹೆಚ್ಚು ಪ್ರೀತಿ ಮತ್ತು ಅಭಿಮಾನ ಇದೆ. ಈ ಹಿನ್ನೆಲೆಯಲ್ಲಿ ದೇವಸ್ಥಾನವನ್ನು ಕಟ್ಟಿಸಿದ್ದೇವೆ. ಇದು ಕರ್ನಾಟಕದಲ್ಲಿ ಮೊದಲ ಪುನೀತ್ ರಾಜಕುಮಾರ್ ಅವರ ದೇವಸ್ಥಾನ ಎಂದು ಹೇಳಿಕೊಳ್ಳಲು ಬಹಳ ಹೆಮ್ಮೆ ಇದೆ. ಈ ದೇವಸ್ಥಾನ ಕಟ್ಟಲು ಒಟ್ಟು 9 ಲಕ್ಷ ಖರ್ಚಾಗಿದೆ. ಇದನ್ನೆಲ್ಲಾ ಅಭಿಮಾನದಿಂದ ಮಾಡಿದ್ದೇನೆ. ಬಹಳಷ್ಟು ಅಭಿಮಾನಿಗಳು ಸಹ ಸಹಾಯ ಮಾಡಿದ್ದಾರೆ. ಎಲ್ಲರೂ ಕೈಜೋಡಿಸಿದ್ದಾರೆ ಎಂದು ಹೇಳಿದರು.