ಪುನೀತ್ ರಾಜ್‍ಕುಮಾರ್ ಕಣ್ಮರೆಯಾಗಿ ಇಂದಿಗೆ 3 ವರ್ಷ: ಕಂಠಿರವ ಸ್ಟುಡಿಯೋದಲ್ಲಿ ಅಪ್ಪು ಪುಣ್ಯಸ್ಮರಣೆ.

31

ಬೆಂಗಳೂರು: ಅಕ್ಟೋಬರ್ 29, 2021 ಚಿತ್ರರಂಗದಲ್ಲಿ ಕತ್ತಲು ಆವರಿಸಿದ ದಿನ. ಇಡೀ ಕರ್ನಾಟಕವೇ ಕಣ್ಣೀರಿಟ್ಟ ದಿನ ಅಂದು ಪವರ್ ಸ್ಟಾರ್, ನಗುಮೊಗದ ಒಡೆಯ, ಚಂದನವನದ ರಾಜಕುಮಾರ, ಪುನೀತ್ ರಾಜ್‍ಕುಮಾರ್ ಕೊನೆಉಸಿರೆಳೆದ ದಿನವದು. ಆದ್ರೆ ಅವರ ನೆನಪು ಮಾತ್ರ ಇಂದಿಗೂ ಕೋಟ್ಯಂತರ ಅಭಿಮಾನಿಗಳ ಹೃದಯದಲ್ಲಿ ಅಚ್ಚಳಿಯದೇ ಉಳಿದಿದೆ. ಇಂದು ಅವರ ಮೂರನೇ ಪುಣ್ಯಸ್ಮರಣೆ ನಡೆಯುತ್ತಿದೆ.
ಕಡಿಮೆ ಸಂಖ್ಯೆಯ ಸಿನಿಮಾಗಳ ಮೂಲಕವೇ ಇಡೀ ಭಾರತೀಯ ಚಿತ್ರರಂಗದ ಮನಗೆದ್ದಿದ್ದ ಪುನೀತ್ ರಾಜ್‍ಕುಮಾರ್ ಅವರು ಹೃದಯಾಘಾತದಿಂದ  ನಿಧನರಾದರು. ಕಂಠೀರವ ಸ್ಟೇಡಿಯಂನಲ್ಲಿರಿಸಿದ ಅಪ್ಪು ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ಜನಸಾಗರವೇ ಹರಿದು ಬಂದಿತ್ತು. ಇಂದು ಪುನೀತ್ ರಾಜ್‍ಕುಮಾರ್ ಅವರ ಮೂರನೇ ಪುಣ್ಯಸ್ಮರಣೆ ಹಿನ್ನೆಲೆ, ರಾಜ್‍ಕುಮಾರ್ ಕುಟುಂಬಸ್ಥರು ಅಪ್ಪು ಸಮಾಧಿ ಇರುವ ಕಂಠಿರವ ಸ್ಟುಡಿಯೋದಲ್ಲಿ ಅಪ್ಪುಗೆ ಇಷ್ಟವಾದ ತಿಂಡಿ-ತಿನಿಸುಗಳನ್ನು ಇಟ್ಟು ಪೂಜೆ ಸಲ್ಲಿಸಿದರು. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅಪ್ಪು ಪುಣ್ಯಸ್ಮರಣೆಯ ಅಂಗವಾಗಿ ವಿವಿದ ಪುಣ್ಯಕಾರ್ಯಗಳು ಜರುಗುತ್ತಿವೆ. ಅಪ್ಪುನನ್ನು ಸ್ಮರಿಸುವ ಕಾರ್ಯ ಮುಂದುವರಿದಿವೆ. ಈಗಾಗಲೇ ಹಲವೆಡೆ ಪುನೀತ್ ರಾಜ್‍ಕುಮಾರ್ ಹೆಸರಲ್ಲಿ ದೇಗುಲಗಳು ನಿರ್ಮಾಣಗೊಂಡಿವೆ. ಇದು ಅಭಿಮಾನಿಗಳ ಅಭಿಮಾನಕ್ಕೆ ಹಿಡಿದ ಕೈಗನ್ನಡಿಯಾಗಿದೆ.