ಪುಲ್ವಾಮದಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ…

222
firstsuddi

ಶ್ರೀನಗರ : ಜಮ್ಮು-ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಭಾರತೀಯ ಯೋಧರು ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಪುಲ್ವಾಮ ಜಿಲ್ಲೆಯ ಕ್ರೀವ್ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಖಚಿತ ಮಾಹಿತಿಯನ್ನು ತಿಳಿದ ಭಾರತೀಯ ಯೋಧರು ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಉಗ್ರರು ಯೋಧರತ್ತ ಗುಂಡಿನ ದಾಳಿಯನ್ನು ನಡೆಸಿದ್ದಾರೆ. ಭಾರತೀಯ ಯೋಧರು ಕೂಡಾ ಉಗ್ರರ ದಾಳಿಗೆ ಪ್ರತಿದಾಳಿ ನಡೆಸಿದ್ದು, ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಅಲ್ಲದೇ ಉಗ್ರರ ಗುಂಡಿನ ದಾಳಿಗೆ ಇಬ್ಬರು ಪೊಲೀಸರು ಗಾಯಗೊಂಡಿದ್ದು, ಇನ್ನು ಕೆಲ ಉಗ್ರರು ಅಡಗಿರುವ ಶಂಕೆ ವ್ಯಕ್ತವಾಗಿದ್ದು, ಉಗ್ರರಿಗಾಗಿ ಶೋಧಕಾರ್ಯ ಮುಂದುವರೆಸಿದ್ದಾರೆ.