ಬೆಂಗಳೂರು : ಪೇಜಾವರ ಶ್ರೀಗಳ ಕುರಿತು ಹೇಳಿಕೆ ಹಿನ್ನಲೆ ಸಂಗೀತ ನಿರ್ದೇಶಕ ಹಂಸಲೇಖ ಅವರಿಗೆ ಬಸವನಗುಡಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.
ಇತ್ತೀಚೆಗೆ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಹಂಸಲೇಖ ಅವರು ಪೇಜಾವರ ಶ್ರೀಗಳ ಕುರಿತು ಹೇಳಿಕೆ ನೀಡಿದ್ದು, ಭಾರಿ ವಿವಾದಕ್ಕೆ ಕಾರಣವಾಗಿತ್ತು. ಪ್ರಕರಣ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಹಂಸಲೇಖ ಕ್ಷಮೆ ಕೇಳಿದ್ದರು. ಇದರ ನಡುವೆ ಹಂಸಲೇಖ ವಿರುದ್ಧ ವಿವಿಧ ಠಾಣೆಗಳಲ್ಲಿ ದೂರು ದಾಖಲಾಗಿತ್ತು. ಇದಕ್ಕೆ ಸಂಬಂಧಿಸಿ ಹಂಸಲೇಖ ಅವರಿಗೆ ನಿನ್ನೆ ನೋಟಿಸ್ ನೀಡಲಾಗಿತ್ತು. ಆದರೆ ಇಂದು ವಿಚಾರಣೆಗೆ ಹಂಸಲೇಖ ಅವರು ಗೈರಾಗಿದ್ದರು. ಈ ಹಿನ್ನೆಲೆ ಭಾನುವಾರದೊಳಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ.
ಇನ್ನು ಭಾನುವಾರದೊಳಗೆ ವಿಚಾರಣೆಗೆ ಹಾಜರಾಗದಿದ್ದರೆ, ಹಂಸಲೇಖ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುವ ಸಾಧ್ಯತೆ ಇದೆ.










