ಬೆಂಗಳೂರು : ಪೇಜಾವರ ಶ್ರೀಗಳ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇರೆಗೆ ನಾದಬ್ರಹ್ಮ ಹಂಸಲೇಖ ಅವರ ವಿರುದ್ಧ ದೂರು ದಾಖಲಾಗಿದೆ.
ಕೃಷ್ಣರಾಜ್ ಎಂಬುವವರು ನಗರದ ಹನುಮಂತನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಹಂಸಲೇಖ ಅವರು ಸಾಮಾಜಿಕ ಸಾಮರಸ್ಯಕ್ಕಾಗಿ ಪೇಜಾವರ ಶ್ರೀಗಳು ಕೈಗೊಂಡ ಕಾರ್ಯಕ್ರಮಗಳ ಬಗ್ಗೆ ಲೇವಡಿ ಮಾಡಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದಾರೆ.
ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಹಂಸಲೇಖ ಪೇಜಾವರ ಶ್ರೀಗಳ ಕುರಿತು ಹೇಳಿಕೆ ನೀಡಿದ್ದ ವಿಡಿಯೋ ವೈರಲ್ ಆಗಿತ್ತು. ಇದಕ್ಕೆ ರಾಜ್ಯಾದ್ಯಂತ ತೀವ್ರ ವಿರೋಧ ವ್ಯಕ್ತವಾಗಿತ್ತು. ಹೇಳಿಕೆ ವಿವಾದದ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಅವರು ಕ್ಷಮೆಯಾಚಿಸಿದ್ದರು.










