ಪೊಲೀಸ್ ಗೌರವಗಳೊಂದಿಗೆ ಸಂಚಾರಿ ವಿಜಯ್ ಅವರ ಅಂತ್ಯಸಂಸ್ಕಾರ : ಸಿಎಂ ಬಿ.ಎಸ್.ಯಡಿಯೂರಪ್ಪ.

76
Firstsuddi

ಬೆಂಗಳೂರು : ಪೊಲೀಸ್ ಗೌರವಗಳೊಂದಿಗೆ ಸಂಚಾರಿ ವಿಜಯ್ ಅವರ ಅಂತ್ಯಸಂಸ್ಕಾರ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಟ ಸಂಚಾರಿ ವಿಜಯ್ ಅವರ ಅಂತ್ಯಕ್ರಿಯೆಯನ್ನು ಪೊಲೀಸ್ ಗೌರವಗಳೊಂದಿಗೆ ನಡೆಸಲಾಗುವುದು. ಅವರ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದಿರುವ ಕುಟುಂಬದವರಿಗೆ ಕೃತಜ್ಞತೆಗಳ ಜೊತೆಗೆ ಸಂತಾಪ ಸೂಚಿಸುತ್ತಾ, ಪ್ರತಿಭಾವಂತ ಕಲಾವಿದ ಸಂಚಾರಿ ವಿಜಯ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿಗಳನ್ನು ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.