ಬೆಳಗಾವಿ : ಸದಲಗಾ ಪೊಲೀಸ್ ಠಾಣೆಯ ಮೇಲೆ ಭೃಷ್ಟಾಚಾರ ನಿಗೃಹ ದಳ(ಎಸಿಬಿ) ದಾಳಿ ನಡೆಸಿದೆ. ಲಂಚ ಪಡೆಯುತ್ತಿದ್ದ ಪಿಎಸ್ಐ ಹಾಗೂ ಇಬ್ಬರು ಕಾನ್ ಸ್ಟೇಬಲ್ ಗಳು ಎಸಿಬಿ ಬಲೆಗೆ ಬಿದ್ದಿದ್ದಾರೆ.
ನಿನ್ನೆ ರಾತ್ರಿ ಚಿಕ್ಕೋಡಿ ತಾಲ್ಲೂಕಿನ ಸದಲಗಾ ಪೊಲೀಸ್ ಠಾಣೆಯ ಮೇಲೆ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು ಪಿಎಸ್ ಐ ಕುಮಾರ ಹಿತ್ತಲಮನಿ ಹಾಗೂ ಕಾನ್ ಸ್ಟೇಬಲ್ ಗಳಾದ ಮಾಯಪ್ಪಾ ಗಡ್ಡೆ ಮತ್ತು ಶ್ರೀಶೈಲ ಮಂಗಿರನ್ನು ವಶಕ್ಕೆ ಪಡೆದಿದ್ದಾರೆ.
ಅನಧಿಕೃತವಾಗಿ ಪಾನ್ ಮಸಾಲಾ ಕಾರ್ಖಾನೆ ನಡೆಸುತ್ತಿದ್ದೀರಿ ಎಂದು ಹೆದರಿಸಿ ಬೋರಗಾಂವದಲ್ಲಿ ಪಾನ್ ಮಸಾಲಾ ಕಾರ್ಖಾನೆ ನಡೆಸುತ್ತಿದ್ದ ಇಚಲಕರಂಜಿ ಮೂಲದ ರಾಜು ಪಾಶ್ಚಾಪುರೆ ಅವರನ್ನು ಹೆದರಿಸಿದ್ದ ಪಿಎಸ್ಐ ಮತ್ತು ಪೇದೆಗಳು ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಪಾನ್ ಮಸಾಲಾ ಕಾರ್ಖಾನೆ ಮಾಲಿಕ ಎಸಿಬಿಗೆ ದೂರು ಸಲ್ಲಿಸಿದ್ದರು. ದೂರಿನ ಹಿನ್ನೆಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.










