ಪೋಕ್ಸೋ ಪ್ರಕರಣ: ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಮುರುಘಾಶ್ರೀ ಮತ್ತೆ ಅರೆಸ್ಟ್…

75
firstsuddi

ದಾವಣಗೆರೆ: ಪೋಕ್ಸೋ ಪ್ರಕರಣದಲ್ಲಿ ಮತ್ತೆ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರ ಬಂಧನವಾಗಿದೆ.

ಎರಡನೇ ಪೋಕ್ಸೋ ಪ್ರಕರಣದಲ್ಲಿ ಚಿತ್ರದುರ್ಗ ನ್ಯಾಯಾಲಯ ಜಾರಿ ಮಾಡಿದ ಅರೆಸ್ಟ್ ವಾರೆಂಟ್ ಮೇರೆಗೆ ಮುರುಘಾಶ್ರಿಯನ್ನು ಬಂಧಿಸಿದ್ದಾರೆ. ಇಂದು ಕೋರ್ಟ್ ಅರೆಸ್ಟ್ ವಾರೆಂಟ್ ಆದೇಶದ ಪ್ರತಿ ಪಡೆದುಕೊಂಡ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ನೇರವಾಗಿ ದಾವಣಗೆರೆಯ ವಿರಕ್ತ ಮಠಕ್ಕೆ ತೆರಳಿ ಮುರುಘಾಶ್ರೀಗಳನ್ನು ಬಂಧಿಸಿದ್ದಾರೆ. ಸಂಜೆ 4.30ಗೆ ಶ್ರೀಗಳನ್ನು ಕೋರ್ಟ್ ಮುಂದೆ ಹಾಜರುಪಡಿಸುವ ಸಾಧ್ಯತೆ ಇದೆ.

ಇತ್ತೀಚೆಗೆ 1ನೇ ಪೊಕ್ಸೋ ಪ್ರಕರಣವೊಂದಕ್ಕೆ ಹೈಕೋರ್ಟ್ ಜಾಮೀನು ನೀಡಿತ್ತು. ಈ ಹಿನ್ನೆಲೆಯಲ್ಲಿ ಶ್ರೀಗಳು ನವೆಂಬರ್ 16ರಂದು ಚಿತ್ರದುರ್ಗ ಜಿಲ್ಲಾ ಕಾರಾಗೃಹದಿಂದ ಹೊರಬಂದಿದ್ದರು. ಆದರೆ ಇದಕ್ಕೆ ಸರ್ಕಾರಿ ವಕೀಲರು ಆಕ್ಷೇಪ ವ್ಯಕ್ತಪಡಿಸಿದ್ದರು. 2ನೇ ಪೋಕ್ಸೋ ಕೇಸಲ್ಲಿ ಬಂಧನ ವಾರೆಂಟ್ ಕೋರಿ ಸರ್ಕಾರಿ ವಕೀಲ ಜಗದೀಶ್ ಕೋರ್ಟ್ ಗೆ ಮನವಿ ಮಾಡಿದ್ದರು. ಇದಕ್ಕೆ ಮುರುಘಾ ಶ್ರೀ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿದ್ದರು. ಸದ್ಯ ಎರಡೂ ಕಡೆಯ ವಾದ ಆಲಿಸಿದ್ದ ಕೋರ್ಟ್, ಅರೆಸ್ಟ್ ವಾರೆಂಟ್ ಜಾರಿ ಮಾಡುವಂತೆ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರಿಗೆ ಖಡಕ್ ಸೂಚನೆ ನೀಡಿದ್ದು, ಇದೀಗ ಶ್ರೀಗಳನ್ನು ಬಂಧಿಸಲಾಗಿದೆ.