ಧಾರವಾಡ: ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ರಿಲೀಫ್ ಸಿಕ್ಕಿದೆ. ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ಪ್ರಕರಣವನ್ನು ರದ್ದು ಕೋರಿ ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದರು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿ.ಎಸ್ ಯಡಿಯೂರಪ್ಪ ಅವರಿಗೆ ನಿರೀಕ್ಷಣಾ ಜಾಮೀನು ನೀಡಿ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಧಾರವಾಡ ಹೈಕೋರ್ಟ್ ಪೀಠ ಇಂದು ಆದೇಶ ಹೊರಡಿಸಿದೆ. ಆದರೆ, ಪ್ರಕರಣ ರದ್ದು ಮಾಡಲು ನಿರಾಕರಿಸಿದೆ. ಇದರಿಂದ ಯಡಿಯೂರಪ್ಪಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ ಅಷ್ಟೇ. ಆದರೆ ಕಷ್ಟ ಇನ್ನೂ ತಪ್ಪಿಲ್ಲ. ಯಾಕಂದ್ರೆ ಕೋರ್ಟ್ ಕೇವಲ ಜಾಮೀನು ನೀಡಿದೆ ಹೊರತು ಪ್ರಕರಣ ರದ್ದು ಮಾಡಿಲ್ಲ. ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣ ರದ್ದು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಮುಗಿದಿದ್ದು, ಇಂದಿಗೆ ಹೈಕೋರ್ಟ್ ತೀರ್ಪು ಕಾಯ್ದಿರಿಸಿತ್ತು. ಅದರಂತೆ ಇದೀಗ ಧಾರವಾಡ ಹೈಕೋರ್ಟ್ ಪೀಠ, ಪ್ರಕರಣ ರದ್ದುಪಡಿಸಲು ನಿರಾಕರಿಸಿದ್ದು, ಕೇವಲ ನಿರೀಕ್ಷಣಾ ಜಾಮೀನು ನೀಡಿದೆ. ಹೀಗಾಗಿ ಯಡಿಯೂರಪ್ಪ ಬಂಧನದಿಂದ ಪಾರಾಗಿದ್ದಾರೆ ಹೊರತೂ ವಿಚಾರಣೆ ಎದುರಿಸಲೇಬೇಕಾಗಿದೆ.










