ಪೋಷಕರು ಡಾನ್ಸ್ ಕ್ಲಾಸ್‌ಗೆ ಹೋಗಬೇಡ ಎಂದಿದ್ದಕ್ಕೆ ಮನನೊಂದು ಯುವತಿ ಆತ್ಮಹತ್ಯೆ…

76
firstsuddi

ಕೋಲಾರ: ಪೋಷಕರು ಡಾನ್ಸ್ ಕ್ಲಾಸ್‌ಗೆ ಹೋಗಬೇಡ ಎಂದಿದ್ದಕ್ಕೆ ಮನನೊಂದು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಚಿನ್ನಕೋಟೆ ಗ್ರಾಮದಲ್ಲಿ ನಡೆದಿದೆ.

ಚಿನ್ನಕೋಟೆ ಗ್ರಾಮದ ಕೀರ್ತನಾ (18) ಆತ್ಮಹತ್ಯೆ ಮಾಡಿಕೊಂಡ ಯುವತಿ. ಡಾನ್ಸ್ ಎಂದರೆ ತುಂಬಾ ಇಷ್ಟಪಡುತ್ತಿದ್ದ ಕೀರ್ತನಾಗೆ ಆಕೆಯ ಪೋಷಕರು ಡಾನ್ಸ್ ಕ್ಲಾಸ್‌ಗೆ ಹೋಗಬೇಡ ಎಂದು ಬುದ್ಧಿವಾದ ಹೇಳಿದ್ದಾರೆ. ಈ ಹಿನ್ನೆಲೆ ಕೀರ್ತನಾ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಈ ಕುರಿತು ಬಂಗಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.