ಪೌರತ್ವ ಕಿಚ್ಚು-ದೆಹಲಿ ಹಿಂಸಾಚಾರಕ್ಕೆ ಬಲಿಯಾದವರ ಸಂಖ್ಯೆ 18ಕ್ಕೆ ಏರಿಕೆ…

152
firstsuddi

ನವದೆಹಲಿ : ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ರಾಷ್ಟ್ರೀಯ ಪೌರತ್ವ ನೊಂದಾಣಿಯನ್ನು ವಿರೋಧಿಸಿ ದೆಹಲಿಯಲ್ಲಿ ನಡೆಯುತ್ತಿರುವ ಹಿಂಸಾಚಾರ ಪ್ರತಿಭಟನೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಹಿಂಸಾಚಾರದಲ್ಲಿ ಬಲಿಯಾದವರ ಸಂಖ್ಯೆ 18 ಕ್ಕೆ ಏರಿಕೆಯಾಗಿದ್ದು, 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಆಸ್ಪತ್ರೆ ಮೂಲಗಳಿಂದ ತಿಳಿದು ಬಂದಿದೆ. ಕಳೆದ ಬಾನುವಾರದಿಂದ ಸಿಎಎ ವಿರೋಧಿಸಿ ಪ್ರತಿಭಟನೆ ನಡೆಯುತ್ತಿದ್ದು, ಹಿಂಸಾಚಾರ ನಡೆಸುವವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು ಹಾಗೂ ಪರಿಸ್ಥಿತಿಯನ್ನು ನಿಯಂತ್ರಿಸಿ ಶಾಂತಿ ಸ್ಥಾಪಿಸಬೇಕು ಎಂದು ಒತ್ತಾಯಿಸಿ ಅಲುಮ್ನಿ ಅಸೋಸಿಯೇಶನ್ ಆಫ್ ಜಾಮಿಯಾ ಮಿಲಿಯಾ ಇಸ್ಲಾಮಿಯಾ ಮತ್ತು ಜಾಮಿಯಾ ಸಮನ್ವಯ ಸಮಿತಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಮುಂದೆ ನಿನ್ನೆ ತಡರಾತ್ರಿ ಪ್ರತಿಭಟನೆ ನಡೆಸಿದೆ.