ಕೊಪ್ಪಳ : ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಮಸೂದೆಯನ್ನು ಜಾರಿ ಮಾಡಿದ್ದಕ್ಕೆ ಹಾಸ್ಯ ಕಲಾವಿದ ಗಂಗಾವತಿ ಪ್ರಾಣೇಶ್ ಅವರು ಮೆಚ್ಚುಗೆ ವ್ಯಕ್ತಪಡಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನಾ ಪತ್ರವನ್ನು ಬರೆದಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರೇ ಯಾವುದೇ ಸ್ವಾರ್ಥವಿಲ್ಲದೆ ರಾಷ್ಟ್ರದ ಏಳಿಗೆಯ ಪಣತೊಟ್ಟು ಕಾಯ್ದೆ ಜಾರಿ ಮಾಡಿದ್ದೀರಿ. ಇದಕ್ಕಾಗಿ ನಿಮಗೆ ಅಭಿನಂದನೆಗಳು. ದೇಶದಲ್ಲಿ ಸಮಾನತೆ, ಮಾನವೀಯ ಮೌಲ್ಯಗಳನ್ನು ನಿರಂತರವಾಗಿ ತಲುಪಿಸುವಲ್ಲಿ ಯಶಸ್ವಿಯಾಗಿದ್ದೀರಿ. ಇದೊಂದು ರೀತಿಯ ತಪಸ್ಸು. ಅಲ್ಲದೇ ಇನ್ನೂ ಬಾಕಿ ಉಳಿದಿರುವ ಕಾನೂನುಗಳನ್ನು ಜಾರಿಗೆ ತರಲು ತಮಗೆ ಶಕ್ತಿ, ಆರೋಗ್ಯ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.











