ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಭುಗಿಲೆದ್ದ ಪ್ರತಿಭಟನೆ-ಕೇಂದ್ರ ಸರ್ಕಾರಕ್ಕೆ ಸುಪ್ರೀಂ ನೊಟೀಸ್…

214
firstsuddi

ನವದೆಹಲಿ : ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ದೇಶಾಧ್ಯಂತ ಪ್ರತಿಭಟನೆ, ಹಿಂಸಾಚಾರ ಹೆಚ್ಚಾಗುತ್ತಿದ್ದು, ಹೀಗಾಗಿ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ನೋಟೀಸ್ ಜಾರಿ ಮಾಡಿದೆ. ಪೌರತ್ವ ತಿದ್ದುಪಡಿ ಕಾಯ್ದೆ ಅಂಗೀಕಾರವಾಗಿದ್ದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‍ಗೆ ಈವರೆಗೂ 59 ಮರುಪರಿಶೀಲನಾ ಅರ್ಜಿಗಳು ಸಲ್ಲಿಕೆಯಾಗಿದ್ದು, ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಜನವರಿ 2ನೇ ವಾರದೊಳಗೆ ಈ ಕುರಿತು ಪ್ರತಿಕ್ರಿಯೆ ನೀಡಬೇಕು ಕೇಂದ್ರ ಸರ್ಕಾರಕ್ಕೆ ನೋಟೀಸ್ ಜಾರಿ ಮಾಡಿದೆ. ಆದರೆ ಹೊಸ ಪೌರತ್ವ ತಿದ್ದುಪಡಿ ಕಾಯ್ದೆಗೆ ತಡೆಯಾಜ್ಞೆ ನೀಡಲು ಸುಪ್ರೀಂ ನಿರಾಕರಿಸಿದ್ದು, ಬಳಿಕ ಈ ಕುರಿತ ವಿಚಾರಣೆಯನ್ನು ಜನವರಿ 22ಕ್ಕೆ ಮುಂದೂಡಿದೆ.