ಪ್ರಚಾರದ ವೇಳೆ ಕೋವಿಡ್ ನಿಯಮ ಉಲ್ಲಂಘನೆ-ನಟ ದರ್ಶನ್ ವಿರುದ್ಧ ಪ್ರಕರಣ ದಾಖಲು…

167
firstsuddi

ಬೆಂಗಳೂರು : ರಾಜ ರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರ ಪರವಾಗಿ ಪ್ರಚಾರಕ್ಕೆ ಆಗಮಿಸಿದ್ದ ಸ್ಯಾಂಡಲ್‍ವುಡ್ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ದರ್ಶನ್ ಅವರು ಆರ್.ಆರ್. ನಗರ ಕ್ಷೇತ್ರಕ್ಕೆ ಉಪಚುನಾವಣೆ ಇರುವ ಹಿನ್ನೆಲೆ, ಶುಕ್ರವಾರ ಬೆಳಗ್ಗೆಯಿಂದ ರಾತ್ರಿಯವರೆಗೂ ಕ್ಷೇತ್ರದ ಸುತ್ತ ತೆರೆದ ವಾಹನದಲ್ಲಿ ಸಂಚಾರ ನಡೆಸಿ ಮುನಿರತ್ನ ಅವರ ಪರವಾಗಿ ಅಬ್ಬರದ ಪ್ರಚಾರ ನಡೆಸಿದ್ದರು. ಈ ಪ್ರಚಾರದ ವೇಳೆ ದರ್ಶನ್ ಅವರು ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸದೆ ಪ್ರಚಾರ ನಡೆಸಿದ್ದಾರೆ ಎಂದು ವಿಪತ್ತು ನಿರ್ವಹಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.