ಪ್ರಚೋದನಕಾರಿ ಹೇಳಿಕೆ : ಕಾಂಗ್ರೆಸ್ ಮುಖಂಡ ಮುಕ್ರಂ ಖಾನ್ ಅರೆಸ್ಟ್…

57
firstsuddi

ಕಲಬುರಗಿ : ಹಿಜಾಬ್ ಪ್ರಕರಣ ಸಂಬಂಧ ಪ್ರಚೋದನಕಾರಿ ಹೇಳಿಕೆ ನೀಡಿದ್ದ ಕಾಂಗ್ರೆಸ್ ಮುಖಂಡ ಮುಕ್ರಂ ಖಾನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಸೇಡಂ ಪಟ್ಟಣದಲ್ಲಿ ನಡೆದ ಹಿಜಾಬ್ ಪರ ಪ್ರತಿಭಟನೆಯಲ್ಲಿ ಮುಕ್ರಂ ಖಾನ್ ಅವರು ಹಿಜಾಬ್ ತಂಟೆಗೆ ಬಂದರೆ ತುಂಡು ತುಂಡು ಮಾಡುತ್ತೇನೆ ಎಂದು ಹೇಳಿಕೆ ನೀಡಿದ್ದರು. ಈ ಸಂಬಂದ ಕಳೆದ ಫೆ.16 ರಂದು ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣ ದಾಖಲಾದ ನಂತರ ತಲೆಮರೆಸಿಕೊಂಡಿದ್ದ ಮುಕ್ರಂ ಖಾನ್ ಜಾಮೀನು ಅರ್ಜಿ ಸಲ್ಲಿಸಿದ್ದರು. ಆದರೆ ಕಲಬುರಗಿ ಜಿಲ್ಲಾ ನ್ಯಾಯಾಲಯವು ಮುಕ್ರಂ ಖಾನ್ ಜಾಮೀನು ಅರ್ಜಿಯನ್ನ ವಜಾಗೊಳಿಸಿ ಆದೇಶಿಸಿತ್ತು. ಈ ಬೆನ್ನಲ್ಲೇ ಮುಕ್ರಂ ಖಾನ್ ರನ್ನು ಹೈದರಾಬಾದ್ ನಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇದೀಗ ಮುಕ್ರಂ ಖಾನ್ ಗೆ ಅನಾರೋಗ್ಯ ಹಿನ್ನಲೆ ಹೈದರಾಬಾದ್ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.