ಪ್ರತಿಕೂಲ ಹವಾಮಾನದಿಂದಾಗಿ ರಕ್ಷಣಾ ಸಚಿವ ಪ್ರಯಾಣಿಸುತ್ತಿದ್ದ ವಿಮಾನ ಸೇರಿ 11 ವಿಮಾನಗಳ ಮಾರ್ಗ ಬದಲಾವಣೆ…

48
firstsuddi

ನವದೆಹಲಿ : ಪ್ರತಿಕೂಲ ಹವಾಮಾನದಿಂದಾಗಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಪ್ರಯಾಣಿಸುತ್ತಿದ್ದ ವಿಮಾನ ಸೇರಿ 11 ವಿಮಾನಗಳ ಮಾರ್ಗ ಬದಲಾವಣೆ ಮಾಡಲಾಗಿದೆ.

ಸಚಿವರು ಗುಜರಾತ್ ನ ವಡೋದರಾದ ಶ್ರೀ ಸ್ವಾಮಿನಾರಾಯಣ ದೇವಸ್ಥಾನದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ನಂತರ ದೆಹಲಿಗೆ ಹಿಂತಿರುಗುತ್ತಿದ್ದರು. ಪ್ರತಿಕೂಲ ಹವಾಮಾನದಿಂದಾಗಿ ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯಬೇಕಿದ್ದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ವಿಮಾನ ಸೇರಿದಂತೆ ಕನಿಷ್ಠ 11 ವಿಮಾನಗಳನ್ನು ಅಹಮದಾಬಾದ್, ಜೈಪುರ, ಲಖನೌ ಮತ್ತು ಆಗ್ರಾಕ್ಕೆ ಮಾರ್ಗ ಬದಲಾಯಿಸಿಲಾಗಿದೆ ಎಂದು ಮೂಲಗಳು ತಿಳಿಸಿವೆ.