“ಪ್ರಧಾನಿ ಮೋದಿ ಅವರ ಬಗ್ಗೆ ಮಾತನಾಡುವವರು ಆಕಾಶಕ್ಕೆ ಉಗುಳಿದಂತೆ”- ಪ್ರತಾಪ್ ಸಿಂಹ.

309
firstsuddi

ಮೈಸೂರು : ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಟೀಕೆ ಮಾಡುವವರಿಗೆ ಸಂಸದ ಪ್ರತಾಪ್ ಸಿಂಹ ಅವರು ತಿರುಗೇಟು ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರ ಬಗ್ಗೆ ಮಾತನಾಡುವವರು ಆಕಾಶಕ್ಕೆ ಉಗುಳಿದಂತೆ. ಆಕಾಶಕ್ಕೆ ಉಗುಳಿದರೆ ಅದು ಅವರ ಮೇಲೆಯೇ ಬಂದು ಬೀಳುತ್ತದೆ. ಮೊದಲು ರಾಜ್ಯದ ಸಂಸದರ ಬಗ್ಗೆ ಮಾತನಾಡುತ್ತಿದ್ದರು, ಈಗಾ ಮೋದಿ ಅವರ ಬಗ್ಗೆ ಮಾತನಾಡುತ್ತಿದ್ದಾರೆ. ಇದರಿಂದ ಯಾವುದೇ ಪ್ರಯೋಜನವಿಲ್ಲ. ಮೋದಿಯವರು ಬಿಹಾರ ನೆರೆ ಬಗ್ಗೆ ಟ್ವೀಟ್ ಮಾಡಿದ್ದರಿಂದ ಕರ್ನಾಟಕ ನೆರೆ ಬಗ್ಗೆ ಟ್ವೀಟ್ ಮಾಡಿಲ್ಲ ಎಂದು ಹೇಳುತ್ತಿದ್ದಾರೆ. ಆದರೆ ಮೋದಿಯವರು ರಾಜ್ಯಕ್ಕೆ ಅಮಿತ್ ಶಾ ಅವರನ್ನು ಕಳುಹಿಸಿದ್ದು ವರಿಗೆ ಕಾಣಲಿಲ್ಲವೇ, ಅವರು ವೈಮಾನಿಕ ಸಮೀಕ್ಷೆ ನಡೆಸಿರುವುದು ಅವರಿಗೆ ಗೊತ್ತಿಲ್ವಾ? ನೆರೆ ಪರಿಹಾರದ ಬಗ್ಗೆ ಮಾತನಾಡಲು ರಾಜ್ಯ ಬಿಜೆಪಿ ಸಂಸದರಿಗೆ ಧೈರ್ಯ ಇಲ್ವಾ ಎಂದು ಕೇಳುತ್ತಾರೆ. ಕೆಲಸ ಮಾಡುವುದಕ್ಕೆ ಧೈರ್ಯ ಯಾಕೆ ಬೇಕು? ಈ ರೀತಿ ಟೀಕೆ ಮಾಡುವುದರಿಂದ ಯಾವುದೇ ಪ್ರಯೋಜನವಿಲ್ಲ ಎಂದರು.