ಪ್ರಧಾನಿ ಮೋದಿ ತುಮಕೂರು ಭೇಟಿ-ಪ್ರತಿಭಟನೆ ನಡೆಸಲು ಹೊರಟಿದ್ದ ರೈತರನ್ನು ವಶಕ್ಕೆ ಪಡೆದ ಪೊಲೀಸರು…

163
firstsuddi

ಶಿವಮೊಗ್ಗ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತುಮಕೂರಿಗೆ ಆಗಮಿಸುತ್ತಿರುವ ಹಿನ್ನೆಲೆ, ಪ್ರತಿಭಟನೆ ನಡೆಸಲು ತುಮಕೂರಿಗೆ ಹೊರಟಿದ್ದ ರೈತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇಂದು ಪ್ರಧಾನಿ ಮೋದಿ ಅವರು ತುಮಕೂರಿನಲ್ಲಿ ನಡೆಯಲಿರುವ ಕಿಸಾನ್ ಸಮ್ಮಾನ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಈ ವೇಳೆ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಪ್ರತಿಭಟನೆ ನಡೆಸಲು ಶಿವಮೊಗ್ಗದಿಂದ ತುಮಕೂರು ಕಡೆಗೆ ಹೊರಟಿದ್ದ ರೈತರನ್ನು ಪೊಲೀಸರು ನಗರದ ರೈಲ್ವೆ ನಿಲ್ದಾಣದಲ್ಲೇ ತುಮಕೂರಿಗೆ ತೆರಳದಂತೆ ತಡೆದು ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕಿಸಾನ್ ಸಮ್ಮಾನ್ ಯೋಜನೆಯ 4ನೇ ಕಂತಿನ ಹಣವನ್ನು ಬಿಡುಗಡೆ ಮಾಡುವ ಸಮಾರಂಭಕ್ಕೆ ಪ್ರಧಾನಿ ಮೋದಿ ಅವರು ಆಗಮಿಸುತ್ತಿದ್ದು, ಕಾರ್ಯಕ್ರಮದ ಬಳಿಕ ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಲಿಂಗೈಕ್ಯ ಶಿವಕುಮಾರ ಶ್ರೀಗಳ ಗದ್ದುಗೆಯನ್ನು ದರ್ಶನ ಪಡೆದು ಪೂಜೆ ನೆರವೇರಿಸಲಿದ್ದಾರೆ. ಅಲ್ಲದೇ ಅವರ ಭೇಟಿಯ ನೆನಪಿಗಾಗಿ ಗದ್ದುಗೆಯ ಪಕ್ಕದಲ್ಲಿ ಬಿಲ್ವಪತ್ರೆ ಗಿಡವನ್ನು ನೆಡಲಿದ್ದಾರೆ. ಬಳಿಕ ಶಿವಕುಮಾರ ಶ್ರೀಗಳ ಮ್ಯೂಸಿಯಂಗೆ ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ.