ಪ್ರಧಾನಿ ಮೋದಿಗೆ ಪತ್ರ ಬರೆದ ಪ್ರಿಯಾಂಕಾ ಗಾಂಧಿ.

98
firstsuddi

ನವದೆಹಲಿ : ಉತ್ತರ ಪ್ರದೇಶದಲ್ಲಿ ನಡೆದ ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಪರೆದಿದ್ದಾರೆ. ಡಿಜಿಪಿ ಸಮಾವೇಶಕ್ಕಾಗಿ ಪ್ರಧಾನಿ ಉತ್ತರ ಪ್ರದೇಶದ ರಾಜಧಾನಿಯಲ್ಲಿದ್ದಾರೆ.

ಪತ್ರದಲ್ಲೇನಿದೆ? :
ದೇಶದ ರೈತರ ಬಗ್ಗೆ ನಿಮ್ಮ ಉದ್ದೇಶಗಳು ಸ್ಪಷ್ಟವಾಗಿದ್ದರೆ, ಲಕ್ನೋದಲ್ಲಿ ನಡೆಯಲಿರುವ ಡಿಜಿಪಿ ಮತ್ತು ಐಜಿಪಿ ಸಮ್ಮೇಳನದಲ್ಲಿ ಭಾಗವಹಿಸಬಾರದು. ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವರೊಂದಿಗೆ ವೇದಿಕೆ ಹಂಚಿಕೊಳ್ಳಬೇಡಿ. ಅವರನ್ನು ವಜಾಗೊಳಿಸಿ. ಕೆಂದ್ರ ಗೃಹ ಖಾತೆಯ ರಾಜ್ಯ ಸಚಿವರಾಗಿ ಅಜಯ್ ಮಿಶ್ರಾ ಮಂದುವರಿದರೆ ರೈತ ಕುಟುಂಕ್ಕೆ ಖಂಡಿತವಾಗಿಯೂ ನ್ಯಾಯ ಸಿಗುವುದಿಲ್ಲ ಎಂದು ಪತ್ರದಲ್ಲಿ ಬರೆದಿದ್ದಾರೆ.

ಅ.3 ರಂದು ಲಖಿಂಪುರ ಖೇರಿಯಲ್ಲಿ ನಡೆದ ಹಿಂಸಾಚಾರದಲ್ಲಿ 8 ಮಂದಿ ರೈತರು ಬಲಿಯಾಗಿದ್ದರು. ಅ.9 ರಂದು ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಅವರನ್ನು ಬಂಧಿಸಲಾಗಿದ್ದು, ಸದ್ಯ ಪ್ರಕರಣದ ಎಲ್ಲಾ 13 ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ.