ಪ್ರಭಾಸ್ ಜೊತೆಗಿನ ಡೇಟಿಂಗ್ ವದಂತಿಗೆ ಬ್ರೇಕ್ ಹಾಕಿದ ಕೃತಿ ಸನೋನ್.

70
firstsuddi

ನಟಿ ಕೃತಿ ಸನೋನ್ ಅವರು ಪ್ರಭಾಸ್ ಜೊತೆ ಡೇಟಿಂಗ್ ಮಾಡುತ್ತಿದ್ದಾರೆ ಮತ್ತು ಶೀಘ್ರದಲ್ಲೇ ಮದುವೆಯಾಗಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಇದೀಗ ಅದಕ್ಕೆಲ್ಲಾ ನಟಿ ಕೃತಿ ಅವರೇ ಸ್ಪಷ್ಟನೆ ನೀಡಿದ್ದಾರೆ.

ಇತ್ತೀಚೆಗೆ ರಿಯಾಲಿಟಿ ಶೋನಲ್ಲಿ ವರುಣ್ ಧವನ್ ಸ್ವಲ್ಪ ವೈಲ್ಡ್ ಆಗಿ ನಡೆದುಕೊಂಡರು ಅಷ್ಟೇ. ತಮಾಷೆಗೆ ಆಡಿದ ಮಾತಿನಿಂದ ಸಾಕಷ್ಟು ವದಂತಿಗಳು ಹುಟ್ಟಿಕೊಂಡಿವೆ. ಬೇರೆ ಯಾವುದೋ ಮಾಧ್ಯಮದವರು ನನ್ನ ಮದುವೆ ಡೇಟ್ ಅನೌನ್ಸ್ ಮಾಡುವ ಮುನ್ನ ನಾನೇ ಆ ಭ್ರಮೆಯನ್ನು ಹೊಡೆದುಹಾಕುತ್ತೇನೆ. ಎಲ್ಲ ವದಂತಿಗಳು ಆಧಾರರಹಿತವಾಗಿವೆ ಎಂದು ಇನ್ ಸ್ಟಾಗ್ರಾಮ್ ಸ್ಟೋರಿಯಲ್ಲಿ ಕೃತಿ ಸನೋನ್ ಬರೆದುಕೊಂಡಿದ್ದಾರೆ.

ಇತ್ತೀಚೆಗೆ ಕಾರ್ಯವೊಂದರಲ್ಲಿ ಬಾಲಿವುಡ್ ನಟ ವರುಣ್ ಧವನ್ ಅವರು ಭಾಗವಹಿಸಿದ್ದರು. ಆ ಕಾರ್ಯಕ್ರಮದಲ್ಲಿ ಕೃತಿ ಸನೂನ್ ಕೂಡ ಇದ್ದರು. ಈ ಕಾರ್ಯಕ್ರಮದಲ್ಲಿ ವರುಣ್ ಧವನ್ ಕೃತಿ ಮನಸ್ಸಿನಲ್ಲಿ ಒಬ್ಬ ಹೀರೋ ಇದ್ದು , ಈಗ ಅವರು ಮುಂಬೈನಲ್ಲಿ ಇಲ್ಲ. ದೀಪಿಕಾ ಪಡುಕೋಣೆ ಜೊತೆ ಶೂಟಿಂಗ್ ಮಾಡುತ್ತಿದ್ದಾರೆ ಎಂದಿದ್ದರು. ಈ ವಿಡಿಯೋ ವೈರಲ್ ಅಗಿತ್ತು.

‘ಪ್ರಾಜೆಕ್ಟ್ ಕೆ’ ಚಿತ್ರಕ್ಕಾಗಿ ಪ್ರಭಾಸ್ ಅವರು ದೀಪಿಕಾ ಜೊತೆ ಶೂಟಿಂಗ್ ಮಾಡುತ್ತಿದ್ದಾರೆ. ಹಾಗಾಗಿ ವರುಣ್ ಹೇಳಿದ್ದು ಪ್ರಭಾಸ್ ಬಗ್ಗೆಯೇ ಎಂದು ಎಲ್ಲರೂ ಊಹಿಸುತ್ತಿದ್ದಾರೆ. ಇದೀಗ ಎಲ್ಲಾ ವದಂತಿಗೂ ಕೃತಿ ಸನೂನ್ ಬ್ರೇಕ್ ಹಾಕಿದ್ದಾರೆ.