ಪ್ರಯಾಣಿಕರಿಗೆ ಗುಡ್ ನ್ಯೂಸ್ – ಇನ್ಮುಂದೆ ಚಿಕ್ಕಬಳ್ಳಾಪುರಕ್ಕೂ ಸಂಚರಿಸಲಿದೆ ಬಿಎಂಟಿಸಿ.

51
firstsuddi

ಬೆಂಗಳೂರು : ಹೊಸ ವರ್ಷ ಆರಂಭದಲ್ಲಿ ಪ್ರಯಾಣಿಕರಿಗೆ ಬಿಎಂಟಿಸಿ ಗುಡ್ ನ್ಯೂಸ್ ಕೊಟ್ಟಿದೆ. ಇನ್ಮುಂದೆ ಚಿಕ್ಕಬಳ್ಳಾಪುರಕ್ಕೂ ಬಿಎಂಟಿಸಿ ಬಸ್ ಗಳು ಸಂಚಾರ ಮಾಡಲಿದೆ.

ಇಷ್ಟು ದಿನ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಮಾತ್ರ ಬಸ್ ಸೇವೆ ಸೀಮಿತವಾಗಿತ್ತು. ಬಿಎಂಟಿಸಿ ಆಡಳಿತ ಮಂಡಳಿ ಸಭೆಯಲ್ಲಿ ಇದೀಗ ಚಿಕ್ಕಬಳ್ಳಾಪುರಕ್ಕೂ ಬಿಎಂಟಿಸಿ ವ್ಯಾಪ್ತಿ ವಿಸ್ತರಣೆ ಮಾಡಿ ಒಮ್ಮತದ ತೀರ್ಮಾನ ಕೈಗೊಳ್ಳಲಾಗಿದೆ.

ಈ ಮೂಲಕ ಚಿಕ್ಕಬಳ್ಳಾಪುರ ಜನತೆಯ ಬೇಡಿಕೆಗೆ ಸ್ಪಂದಿಸಿ ಬಿಎಂಟಿಸಿ ಬೋರ್ಡ್ ಅನುಮತಿ ನೀಡಿದೆ. ಇನ್ನು ಮುಂದೆ ಸಾಮಾನ್ಯ ಹಾಗೂ ಐಷಾರಾಮಿ ಬಸ್ ಗಳು ಬೆಂಗಳೂರು ಟು ಚಿಕ್ಕಬಳ್ಳಾಪುರಕ್ಕೆ ಸಂಚಾರ ಮಾಡಲಿದೆ.