ಪ್ರಯಾಣಿಕರಿಗೆ ಗುಡ್‍ನ್ಯೂಸ್; ನಾಗಸಂದ್ರ-ಮಾದಾವರ ಮೆಟ್ರೋ ಸಂಚಾರ ನಾಳೆ ಆರಂಭ.

40

ಬೆಂಗಳೂರು: ಸಂಪೂರ್ಣ ಪೂರ್ಣಗೊಂಡಿರುವ 3.14-ಕಿಮೀ ಮಾದಾವರ-ನಾಗಸಂದ್ರ ಮಾರ್ಗ ಗುರುವಾರ ವಾಣಿಜ್ಯ ಕಾರ್ಯಾಚರಣೆಗೆ ಮುಕ್ತಗೊಳ್ಳುತ್ತಿದೆ ಎಂದು ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತ ಮೂಲಗಳು ಮಾಹಿತಿ ನೀಡಿವೆ. ಬಿಎಂಆರ್‍ಸಿಎಲ್‍ನ ಹಿರಿಯ ಅಧಿಕಾರಿಯೊಬ್ಬರು ಸುದ್ದಿಗಾರರೊಂದಿಗೆ ಮಾತನಾಡಿ, ಕಾರ್ಯಕ್ರಮದ ಮೂಲಕ ರೈಲು ಸಂಚಾರಕ್ಕೆ ದಿನಾಂಕ, ಸಮಯ ನಿಗದಿಯಾಗಿಲ್ಲ. ಹೀಗಾಗಿ ಔಪಚಾರಿಕವಾಗಿ ಗುರುವಾರವೇ ರೈಲು ಸಂಚಾರ ಆರಂಭವಾಗಲಿದೆ ಎಂದು ಹೇಳಿದ್ದಾರೆ. ಈ ನಡುವೆ ನಾಗಸಂದ್ರ-ಮಾದವರ ನಡುವಿನ ಮೆಟ್ರೋ ಸಂಚಾರಕ್ಕೆ ತ್ವರಿತ ಅನುಮತಿ ನೀಡಿದ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಸಂಸದ ತೇಜಸ್ವಿ ಸೂರ್ಯ ಅವರು ಧನ್ಯವಾದಗಳನ್ನು ತಿಳಿಸಿದ್ದಾರೆ. ಈ ಹಿಂದೆ ತೇಜಸ್ವಿ ಸೂರ್ಯ ಅವರು ಮೆಟ್ರೋ ಮಾರ್ಗ ಸಂಚಾರಕ್ಕೆ ತ್ವರಿತ ಅನುಮತಿ ನೀಡುವ ವಿಚಾರವನ್ನು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮೂಲಕ ಕೇಂದ್ರ ನಗರಾಭಿವೃದ್ದಿ ಸಚಿವರ ಗಮನಕ್ಕೆ ತರುವ ಪ್ರಯತ್ನ ಮಾಡಿದ್ದರು. ಅಲ್ಲದೆ, ಸಚಿವ ಮನೋಹರ್ ಲಾಲ್ ಖಟ್ಟರ್ ಅವರನ್ನೂ ಹಲವು ಬಾರಿ ಭೇಟಿಯಾಗಿ ವಿಸ್ತರಿತ ಹಸಿರು ಮಾರ್ಗದ ತ್ವರಿತ ಕಾರ್ಯಾಚರಣೆಗೆ ಒತ್ತಾಯಿಸಿದ್ದರು.