ಪ್ರವಚನ ಮಾಡುತ್ತಿರುವಾಗಲೇ ಹೃದಯಾಘಾತಕ್ಕೊಳಗಾಗಿ ಕೊನೆಯುಸಿರೆಳೆದ ಸ್ವಾಮೀಜಿ.

74
firstsuddi

ಬೆಳಗಾವಿ : ಪ್ರವಚನ ಮಾಡುತ್ತಿರುವಾಗಲೇ ತೀವ್ರ ಹೃದಯಾಘಾತಕ್ಕೊಳಗಾಗಿ ಸ್ವಾಮೀಜಿಯೊಬ್ಬರು ಜನ್ಮದಿನದಂದೇ ಕೊನೆಯುಸಿರೆಳೆದಿದ್ದಾರೆ. ಜಿಲ್ಲೆಯ ಗೋಕಾಕ ತಾಲೂಕಿನ ಬಳೋಬಾಳ ಗ್ರಾಮದ ಬಸವಯೋಗ ಮಂಟಪ ಟ್ರಸ್ಟ್ ಬಳೋಬಾಳ ಮಠದ  ಸಂಗನಬಸವ ಮಹಾಸ್ವಾಮೀಜಿ (53) ಹೃದಯಾಘಾತದಿಂದ ನಿಧನರಾದವರು. ನವೆಂಬರ್ 6ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಸಂಗನಬಸವ ಮಹಾಸ್ವಾಮೀಜಿ ಅವರ ಹುಟ್ಟುಹಬ್ಬದ ನಿಮಿತ್ತ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಕುರ್ಚಿಯಲ್ಲಿ ಕುಳಿತು ಆಶೀರ್ವಚನ ನೀಡುತ್ತಿದ್ದರು. ಈ ವೇಳೆ ಅವರು ಹೃದಯಾಘಾತಕ್ಕೊಳಗಾಗಿ ಕುಸಿದು ಬಿದ್ದಿದ್ದು, ಕ್ಷಣವೇ ಕೊನೆಯುಸಿರೆಳೆದಿದ್ದಾರೆ. ಸ್ವಾಮೀಜಿ ಬೀಳುವ ದೃಶ್ಯ ಭಕ್ತರ ಮೊಬೈಲ್ ನಲ್ಲಿ ಸೆರೆಯಾಗಿದೆ.