ಉಡುಪಿ : ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಬೈಂದೂರು ತಾಲೂಕಿನ ಕಿರುಮಂಜೇಶ್ವರದಲ್ಲಿ ನಿನ್ನೆ ಸಂಜೆ ನಡೆದಿದೆ.
ಅಕ್ಷಯ್ (23) ಮೃತ ಯುವಕ. ಇನ್ನೂ ಅಪಘಾತದಲ್ಲಿ ತೇಜಸ್, ಪವನ್, ಹರ್ಷ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದು, ಕುಂದಾಪುರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಂಗಳೂರು ಮೂಲದ ಈ ನಾಲ್ವರು ಯುವಕರು ಪ್ರವಾಸಕ್ಕೆಂದು ಇನ್ನೋವಾ ಕಾರಿನಲ್ಲಿ ಉತ್ತರ ಕನ್ನಡ ಜಿಲ್ಲೆಯ ಯಾಣಕ್ಕೆ ಆಗಮಿಸಿದ್ದರು. ಪ್ರವಾಸ ಮುಗಿಸಿ ವಾಪಾಸಾಗುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










