ಮೈಸೂರು : ಕಚೇರಿಯಲ್ಲಿ ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು, ಜಿಲ್ಲೆಯಲ್ಲಿ ಕೊರೊನಾ 2ನೇ ಅಲೆಯ ಆರ್ಭಟ ಹೆಚ್ಚಾಗುತ್ತಿದ್ದು, ಜಿಲ್ಲೆಗೆ ಬರುವವರು ಕೊರೊನಾ ನೆಗೆಟಿವ್ ವರದಿ ತರಬೇಕು. ಕೊರೊನಾ ನೆಗೆಟಿವ್ ವರದಿ ಇದ್ದರೆ ಮಾತ್ರ ಪ್ರವಾಸ ತಾಣಗಳಿಗೆ ಅವಕಾಶ ಕಲ್ಪಿಸಲಾಗುತ್ತದೆ. ಜೊತೆಗೆ ಸಿನಿಮಾ ವೀಕ್ಷಣೆಗೆ ಕೋವಿಡ್ ರಿಪೋರ್ಟ್ ಕಡ್ಡಾಯ. ಇಂದಿನಿಂದ ಸಿನಿಮಾ ನೋಡಲು ಥಿಯೇಟರ್ ಗೆ ಹೋಗುವವರು ಕೋವಿಡ್ ರಿಪೋರ್ಟ್ ಹಿಡಿದೇ ಹೋಗಬೇಕು ಎಂದು ತಿಳಿಸಿದ್ದಾರೆ.
ಮದುವೆ ಸಮಾರಂಭಗಳನ್ನು ಮಾಡಬೇಕಾದರೆ ಕಡ್ಡಾಯವಾಗಿ ನಗರ ಪೊಲೀಸ್ ಕಮೀಷನರ್ ಕಚೇರಿಯಿಂದ ಅನುಮತಿ ಪಡೆಯಬೇಕು. ಈ ನಿರ್ಬಂಧ ಏಪ್ರೀಲ್ 10 ರಿಂದ 20 ರವರೆಗೆ ಸೀಮಿತವಾಗಿರುತ್ತದೆ. ಹೆಚ್ಚಿನ ರಜೆಗಳು ಇರುವ ಕಾರಣದಿಂದ ಈ ಆದೇಶ ಜಾರಿ ಮಾಡುತ್ತಿದ್ದೇವೆ. ಇದರ ತಪಾಸಣೆಗಾಗಿ 300 ಹೋಂ ಗಾರ್ಡ್ ಗಳನ್ನು ನಿಯೋಜಿಸುತ್ತೇವೆ. ಕೋವಿಡ್ ಪರಿಸ್ಥಿತಿಯನ್ನು ನೋಡಿಕೊಂಡು ತೀರ್ಮಾನ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಅವರು ಹೇಳಿಕೆ ನೀಡಿದ್ದಾರೆ.










