ಪ್ರವಾಹವಾದ ಎಲ್ಲಾ ಜಿಲ್ಲೆಗಳಲ್ಲಿ ಬಿಜೆಪಿ ಸಂಸದರೇ ಇದ್ದಾರೆ, ಅವರೆಲ್ಲರೂ ಜನ ಪ್ರತಿನಿಧಿಯಾಗಲು ನಾಲಾಯಕ್ : ದಿನೇಶ್ ಗುಂಡುರಾವ್.

206
firstsuddi

ಬೆಂಗಳೂರು : ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್ ಅವರು ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಅಮೆರಿಕದ ಹ್ಯೂಸ್ಟನ್ ಕಾರ್ಯಕ್ರಮಕ್ಕೆ ತೆರಳಿ ಅಲ್ಲಿನ ಪ್ರವಾಹ ಸಂತ್ರಸ್ಥರಿಗೆ ಸಾಂತ್ವಾನ ಹೇಳುತ್ತಾರೆ. ಆದರೆ ನಮ್ಮ ರಾಜ್ಯದಲ್ಲಿ ಉಂಟಾದ ಪ್ರವಾಹ ಪರಿಸ್ಥಿತಿಯನ್ನು ವೀಕ್ಷಿಸುವುದಿರಲಿ ಪ್ರವಾಹ ಸಂತ್ರಸ್ಥರಿಗೆ ಸಾಂತ್ವಾನ ಕೂಡಾ ಹೇಳಲಿಲ್ಲ. ಪ್ರವಾಹವಾದ ಎಲ್ಲಾ ಜಿಲ್ಲೆಗಳಲ್ಲಿ ಬಿಜೆಪಿ ಸಂಸದರೇ ಇದ್ದಾರೆ. ಅವರೆಲ್ಲರೂ ಇದ್ದು ಏನೂ ಮಾಡುತ್ತಿದ್ದಾರೆ. ಜನ ಪ್ರತಿನಿಧಿಯಾಗಲು ಅವರು ಲಾಯಕಿಲ್ಲ. ಜನ ವಿ ರೋಧಿ ನೀತಿಯನ್ನೇ ಬಿಜೆಪಿ ಒಳಗೊಂಡಿದೆ. ಹೀಗಾಗಿ ನಾವು ನಾಳೆ ಪ್ರವಾಹ ಸಂತ್ರಸ್ಥರ ವಿಚಾರವಾಗಿ ಬೆಳಗಾವಿಯಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದೇವೆ ಎಂದು ತಿಳಿಸಿದರು.