ಪ್ರವೀಣ್ ನೆಟ್ಟಾರು ಹತ್ಯೆ ಕೇಸ್ – ಮತ್ತಿಬ್ಬರ ಬಂಧನ…

53
firstsuddi

ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಮತ್ತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬೆಳ್ಳಾರೆ ಮತ್ತು ಪಲ್ಲಮಜಲು ನಿವಾಸಿಗಳಾದ ಸದ್ದಾಂ(32), ಹ್ಯಾರಿಸ್ (42) ಬಂಧಿತ ಆರೋಪಿಗಳು.

ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 28 ರಂದು ಶಫೀಕ್ ಮತ್ತು ಝಾಕೀರ್ ಅವರನ್ನು ಬಂಧಿಸಲಾಗಿತ್ತು. ಶಂಕಿತ ಸಂಚುಕೋರರು, ಹಲ್ಲೆಕೋರರ ಪತ್ತೆಗೆ ಶೋಧ ಕಾರ್ಯ ನಡೆಯುತ್ತಿದೆ. ಹತ್ಯೆಗೆ ಬಳಸಲಾಗಿದ್ದ ತಲ್ವಾರ್ ಮತ್ತು ಬೈಕ್ ವಶಕ್ಕೆ ಹುಡುಕಾಟ ನಡೆಸಲಾಗುತ್ತಿದೆ. ಇನ್ನೂ ನಾಲ್ವರು ಆರೋಪಿಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಕೇಸ್ ಟ್ರೇಸ್ ಆಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.