ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ – ತನಿಖೆಗೆ 6 ತಂಡಗಳ ರಚನೆ, 15ಕ್ಕೂ ಹೆಚ್ಚು ಜನ ವಶಕ್ಕೆ…

57
firstsuddi

ಮಂಗಳೂರು : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆ ಸುಳ್ಯದ ಬೆಳ್ಳಾರೆಯಲ್ಲಿ ಮಾಹಿತಿ ನೀಡಿದ ಎಡಿಜಿಪಿ ಅಲೋಕ್ ಕುಮಾರ್, ಹತ್ಯೆಯ ಬಗ್ಗೆ ಎಲ್ಲಾ ಆಯಾಮಗಳಿಂದ ತನಿಖೆ ನಡೆಯುತ್ತಿದೆ. ಮಂಗಳೂರು ಕಮಿಷನರ್ ಉಡುಪಿ ಪೊಲೀಸರ ಸಹಾಯ ಪಡೆದು 6 ತಂಡಗಳನ್ನು ರಚನೆ ಮಾಡಿದ್ದೇವೆ. ಈಗಾಗಲೇ 15ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದೇವೆ ಎಂದು ತಿಳಿಸಿದರು.

ಘಟನೆಯ ಆರೋಪಿಗಳ ಪತ್ತೆಗೆ ಪೊಲೀಸ್ ಅಧಿಕಾರಿಗಳಿಗೆ ಜನರು ಅವಕಾಶ ಮಾಡಿ ಕೊಡಬೇಕು. ಹತ್ಯೆಗೆ 2-3 ಕಾರಣಗಳು ಮೇಲ್ನೋಟಕ್ಕೆ ಕಂಡುಬರುತ್ತಿವೆ. ವಶಕ್ಕೆ ಪಡೆದವರಲ್ಲಿ ಕೊಲೆಗಡುಕರು ಇದ್ದಾರೆಯೇ ಎಂಬುದನ್ನು ಈಗಲೇ ಹೇಳಲು ಸಾಧ್ಯವಿಲ್ಲ. ಆರೋಪಿಗಳನ್ನು ದಸ್ತಗಿರಿ ಮಾಡಿದ ಮೇಲೆಯೇ ಹತ್ಯೆಗೆ ಕಾರಣವನ್ನು ತಿಳಿಸಬಹುದು. ಘಟನಾ ಪ್ರದೇಶದಲ್ಲಿ ಜನರ‍್ಯಾರೂ ಗುಂಪು ಕಟ್ಟಿ ಓಡಾಡಬಾರದು ಎಂದು ಎಚ್ಚರಿಕೆ ನೀಡಿದರು.

ಲಾಠಿಚಾರ್ಜ್ ಬಗ್ಗೆ ಪ್ರತಿಕ್ರಿಯಿಸಿಅ ಅವರು, ಅಂತಿಮ ದರ್ಶನಕ್ಕೆ ಸಂಸದರು, ಸಚಿವರು ಸ್ಥಳಕ್ಕೆ ಬಂದಿದ್ದರು. ಈ ವೇಳೆ ಜನರು ಭಾವಾವೇಶದಿಂದ ವಾಹನವನ್ನು ತಳ್ಳಲು ಪ್ರಯತ್ನಿಸಿದ್ದಾರೆ. ಪರಿಸ್ಥಿತಿ ಹತೋಟಿಗೆ ತರಲು ಲಘು ಲಾಠಿಪ್ರಹಾರ ಮಾಡಬೇಕಾಯಿತು. ಜಿಲ್ಲಾಧಿಕಾರಿ ಸೆಕ್ಷನ್ 144 ಜಾರಿ ಮಾಡಿದ್ದಾರೆ. ಪರಿಸ್ಥಿತಿ ಈಗ ಹತೋಟಿಯಲ್ಲಿದೆ ಎಂದರು.