ದಕ್ಷಿಣ ಕನ್ನಡ : ಬೆಳ್ಳಾರೆಯ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ ಸಂಬಂಧ ಎನ್ ಐಎ ಅಧಿಕಾರಿಗಳು ಮತ್ತೆ ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಎನ್ ಐಎ ಅಧಿಕಾರಿಗಳು ಇಂದು ರಾಜ್ಯದ ಹಲವಡೆ ದಾಳಿ ನಡೆಸಿದ್ದು, ದಾಳಿ ವೇಳೆ ಬೆಳ್ಳಾರೆ ಗ್ರಾಮ ಪಂಚಾಯಿತಿ ಸದಸ್ಯ ಇಕ್ಬಾಲ್, ಸುಳ್ಯದ ಇಬ್ರಾಹಿಂ, ಎಸ್ ಡಿಪಿಐ ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆಯನ್ನು ಎನ್ ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಈಗಾಗಲೇ ಎನ್ ಐಎ ತಂಡ ಪ್ರವೀಣ್ ನೆಟ್ಟಾರ್ ಹತ್ಯೆಯ ಬಳಿಕ ನಾಪತ್ತೆಯಾದ ನಾಲ್ಕು ಜನ ಆರೋಪಿಗಳ ಸುಳಿವು ಕೊಟ್ಟವರಿಗೆ ನಗದು ಬಹುಮಾನವನ್ನು ಘೋಷಣೆ ಮಾಡಿದೆ.










