ಮುಂಬೈ: ಪ್ರಸಿದ್ಧ ಗಾಯಕಿ ಲತಾ ಮಂಗೇಶ್ಕರ್(92) ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಲತಾ ಮಂಗೇಶ್ಕರ್ ಅವರು 2001ರಲ್ಲಿ ಭಾರತ ರತ್ನ ಪ್ರಶಶ್ತಿಯನ್ನು ಪಡೆದಿದ್ದಾರೆ. ಪದ್ಮಭೂಷಣ, ಪದ್ಮವಿಭೂಷಣ, ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಮತ್ತು ಹಲವಾರು ರಾಷ್ಟ್ರ ಪ್ರಶಸ್ತಿಗಳು ಮತ್ತು ಚಲನಚಿತ್ರ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗಿದೆ.










