ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಪತಿಯ ಹತ್ಯೆ…

176
firstsuddi

ಮಂಡ್ಯ : ಪ್ರಿಯಕರನ ಜೊತೆ ಸೇರಿ ಪತಿಯನ್ನು ಪತ್ನಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಅರಕೆರೆ ಗ್ರಾಮದಲ್ಲಿ ನಡೆದಿದೆ. ಸತೀಶ್ ಎಂಬುವವರು ಕೊಲೆಯಾದ ವ್ಯಕ್ತಿ. ಮೇ 23ರಂದು ಪತಿ ಕಾಣೆಯಾಗಿದ್ದಾರೆ ಎಂದು ಪತ್ನಿ ಪೊಲೀಸ್ ಠಾಣೆಗೆ ದೂರನ್ನು ನೀಡಿದ್ದು, ದೂರು ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು ಈ ಬಗ್ಗೆ ಪತ್ನಿಯನ್ನು ವಿಚಾರಣೆಗೆ ಒಳಪಡಿಸಿದ್ದು, ವಿಚಾರಣೆ ವೇಳೆ ಪ್ರಿಯಕರನ ಜೊತೆ ಸೇರಿ ಪತಿಯನ್ನು ಕೊಲೆ ಮಾಡಿ ಶವವನ್ನು ಹೂತು ಹಾಕಿದ್ದಾರೆ ಎಂದು ತಿಳಿದು ಬಂದಿದ್ದು, ಪೊಲೀಸರು ಶವವನ್ನು ಹೊರತೆಗೆದು ಪರಿಶೀಲನೆ ನಡೆಸುತ್ತಿದ್ದು, ಅರಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.