ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ಕೊಲೆಗೈದ ಪತ್ನಿ…

173
firstsuddi

ಚಾಮರಾಜನಗರ : ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ಪತ್ನಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ರಾಘವಪುರ ಗ್ರಾಮದಲ್ಲಿ ನಡೆದಿದೆ. ರಾಘವಪುರ ಗ್ರಾಮದ ನಿವಾಸಿ ನಾಗರಾಜು ನಾಯಕ್ ಕೊಲೆಯಾದ ವ್ಯಕ್ತಿ. ಮೃತ ವ್ಯಕ್ತಿ ತೊಂಡವಾಡಿ ಗ್ರಾಮದ ಪದ್ಮ ಎಂಬುವವರು ವಿವಾಹವಾಗಿ ಅನ್ಯೂನ್ಯವಾಗಿ ಜೀವನ ನಡೆಸುತ್ತಿದ್ದರು. ಆದರೆ ಪದ್ಮ ಅವರು ಗ್ರಾಮದ ಮಣಿಕಂಠ ಎಂಬುವವರನ್ನು ಪ್ರೀತಿಸುತ್ತಿದ್ದರು. ಇದರಿಂದ ಪತಿ ಇದ್ದರೆ ತಮ್ಮ ಪ್ರೀತಿಗೆ ಅಡ್ಡಿಯಾಗುತ್ತದೆ ಎಂದು ಪ್ರಿಯಕರನೊಂದಿಗೆ ಸೇರಿ ತನ್ನ ಪತಿಯನ್ನೇ ಕೊಲೆ ಮಾಡಿದ್ದು, ಈ ಕುರಿತು ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾದ 24 ಗಂಟೆಯೊಳಗೆ ಬೇಗೂರು ಪೊಲೀಸರು ಪದ್ಮ ಹಾಗೂ ಪ್ರಿಯಕರ ಮಣಿಕಂಠ ಅವರನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.