ಪ್ರೀತಿ ತಿರಸ್ಕರಿಸಿದ್ದಕ್ಕೆ ಕಿಡ್ನಾಪ್: ಅತ್ಯಾಚಾರವೆಸಗಿ ಯುವತಿ ಕೊಂದ ಪಾಗಲ್ ಪ್ರೇಮಿ!

68
firstsuddi

ಚಿತ್ರದುರ್ಗ: ಪ್ರೀತಿ ತಿರಸ್ಕರಿಸಿದ್ದಕ್ಕೆ ವ್ಯಕ್ತಿಯೊಬ್ಬ ತನ್ನ ಪ್ರೇಯಸಿಯನ್ನು ಕಿಡ್ನಾಪ್ ಮಾಡಿ ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.

ಚಿತ್ರದುರ್ಗ ತಾಲೂಕಿನ ಹುಲ್ಲೂರು ನಿವಾಸಿ ಅರ್ಪಿತಾ (19) ಹತ್ಯೆಯಾದ ಯುವತಿ. ಆರೋಪಿ ಅಜಯ್ ಅಕ್ಟೋಬರ್ 3 ರಂದು ಆಟೋದಲ್ಲಿ ಯುವತಿಯನ್ನು ಅಪಹರಿಸಿ ಅತ್ಯಾಚಾರವೆಸಗಿ ಹಲ್ಲೆ ನಡೆಸಿ ಬಳಿಕ ಆಸ್ಪತ್ರೆಗೆ ದಾಖಲಿಸಿ ಎಸ್ಕೇಪ್ ಆಗಿದ್ದ. ತಲೆಗೆ ತೀವ್ರವಾಗಿ ಪೆಟ್ಟು ಬಿದ್ದ ಹಿನ್ನೆಲೆ ಬ್ರೈನ್ ಡೆಡ್‌ನಿಂದಾಗಿ ಯುವತಿ ಮೃತಪಟ್ಟಿದ್ದಾರೆ.

ಸದ್ಯ ಯುವತಿ ಪೋಷಕರು ಚಿತ್ರದುರ್ಗ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸದ್ಯ ಆರೋಪಿ ಅಜಯ್ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.