ಪ್ರೀತಿಸಿ ಮದುವೆಯಾದ ಮಗಳ ತಾಳಿ ಕಿತ್ತು, ಜುಟ್ಟು ಹಿಡಿದು ಎಳೆದೊಯ್ಯಲು ಯತ್ನಿಸಿದ ತಂದೆ!

74
firstsuddi

ಮೈಸೂರು : ಪ್ರೀತಿಸಿ ಮದುವೆಯಾದ ಮಗಳ ತಾಳಿ ಕಿತ್ತು ಹಾಕಿದ ತಂದೆ ಆಕೆಯ ಜುಟ್ಟು ಹಿಡಿದು ಎಳೆದೊಯ್ಯಲು ತಂದೆ ಯತ್ನಿಸಿರುವ ಘಟನೆ ಜಿಲ್ಲೆಯ ನಂಜನಗೂಡಿನಲ್ಲಿ ನಡೆದಿದೆ.

ನಂಜನಗೂಡು ತಾಲೂಕು ಹರತಲೆ ಗ್ರಾಮದ ಚೈತ್ರ ಹಾಗೂ ಹಲ್ಲರೆ ಗ್ರಾಮದ ಮಹೇಂದ್ರ ಕಳೆದ ಒಂದೂವರೆ ವರ್ಷದಿಂದ ಪ್ರೀತಿಸುತಿದ್ದು, ಡಿಸೆಂಬರ್ 8 ರಂದು ಮದುವೆ ಆಗಿದ್ದರು. ಅದರಂತೆ ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿ ತಮ್ಮ ವಿವಾಹವನ್ನ ನೋಂದಾಯಿಸಿಕೊಳ್ಳಲು ಬಂದಿದ್ದಾರೆ.

ನೋಂದಣಿ ಪ್ರಕ್ರಿಯೆ ಮುಗಿಸಿ ಕಚೇರಿಯಿಂದ ಹೊರ ಬರುತ್ತಿದ್ದಂತೆಯೇ ಚೈತ್ರ ತಂದೆ ಬಸವರಾಜ ನಾಯ್ಕ ಮಗಳ ಕತ್ತಿನಲ್ಲಿದ್ದ ಮಾಂಗಲ್ಯ ಸರವನ್ನ ಕಿತ್ತುಹಾಕಿ ಜುಟ್ಟು ಹಿಡಿದು ಎಳೆದಾಡಿ ಬಲವಂತವಾಗಿ ಕರೆದೊಯ್ಯಲು ಯತ್ನಿಸಿದ್ದಾರೆ. ತಂದೆಯ ಕೈಯಿಂದ ಬಿಡಿಸಿಕೊಳ್ಳಲು ಚೈತ್ರ ಹರಸಾಹಸ ನಡೆಸಿದ್ದಾಳೆ. ಈ ವೇಳೆ ಸಾರ್ವಜನಿಕರು ಮಧ್ಯ ಪ್ರವೇಶಿಸಿ ಚೈತ್ರಾಳನ್ನ ಬಿಡಿಸಿದ್ದಾರೆ. ಯುವತಿ ತನಗೆ ತನ್ನ ತಂದೆಯಿಂದ ರಕ್ಷಣೆ ಬೇಕೆಂದು ನಂಜನಗೂಡು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.