ಚಿಕ್ಕಮಗಳೂರು : ಪ್ರೀತಿಸಿದ ಹುಡುಗಿ ಮದುವೆಗೆ ನಿರಾಕರಿಸಿದ್ದಕ್ಕೆ ಮನನೊಂದು ಪ್ರಿಯಕರ ನೇಣಿಗೆ ಶರಣಾಗಿರುವ ಘಟನೆ ಜಿಲ್ಲೆಯ ಎನ್.ಆರ್. ಪುರ ತಾಲೂಕಿನ ಮುತ್ತಿನಕೊಪ್ಪ ಬಳಿಯ ಶಂಕರಪುರದಲ್ಲಿ ನಡೆದಿದೆ.
ಚೇತನ್(31) ಆತ್ಮಹತ್ಯೆ ಮಾಡಿಕೊಂಡ ಯುವಕ. ನಾನು ಗಾನವಿ ಕಳೆದ 9 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದೆವು. ನನ್ನಿಂದ ಆಕೆ 4 ಲಕ್ಷ ರೂ. ಹಣವನ್ನು ಕಿತ್ತುಕೊಂಡಿದ್ದಾಳೆ ಎಂದು ಚೇತನ್ ಗಂಭೀರ ಆರೋಪ ಮಾಡಿದ್ದಾನೆ. ಅಲ್ಲದೆ ನನ್ನ ಚಿತೆಗೆ ಆಕೆಯೇ ಬೆಂಕಿ ಇಡಬೇಕು, ಆಕೆ ಬರುವತನಕ ಹೆಣವನ್ನು ಕೆಳಗಿಳಿಸಬೇಡಿ. ನನ್ನ ಸಾವಿಗೆ ನ್ಯಾಯ ಸಿಗಬೇಕೆಂದರೆ ಆಕೆಗೆ ಶಿಕ್ಷೆಯಾಗಬೇಕು. ನನಗೆ ಮಾನಸಿಕ ಕಿರುಕುಳ ನೀಡಿದ್ದರಿಂದ ಆತ್ಮಹತ್ಯೆಗೆ ಶರಣಾಗುತ್ತಿದ್ದೇನೆ ಎಂದು ಡೆತ್ ನೋಟ್ ಬರೆದಿಟ್ಟು ಹಾಗೂ ಸಂಬಂಧಿಕರಿಗೆ ವಾಯ್ಸ್ ಮೆಸೇಜ್ ಕಳುಹಿಸಿ ಚೇತನ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಎನ್.ಆರ್ ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.










