ಪ್ರೀತಿಸುವಂತೆ ಯುವಕನಿಂದ ಕಿರುಕುಳ – ಆತ್ಮಹತ್ಯೆಗೆ ಶರಣಾದ ಯುವತಿ…

63
firstsuddi

ದೇವನಹಳ್ಳಿ: ಯುವಕನೋರ್ವ ಪ್ರೀತಿಸುವಂತೆ ಕಿರುಕುಳ ನೀಡುತ್ತಿದ್ದ ಹಿನ್ನೆಲೆಯಲ್ಲಿ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಮಲ್ಲತಹಳ್ಳಿ ಗ್ರಾಮದಲ್ಲಿ ನಡೆದಿದೆ. ದೊಡ್ಡಬಳ್ಳಾಪುರ ತಾಲೂಕಿನ ಮಲ್ಲತಹಳ್ಳಿ ನಿವಾಸಿ ಪಲ್ಲವಿ(22) ಮೃತ ದುರ್ದೈವಿ. ಹಾಗೂ ಇದೇ ತಾಲೂಕಿನ ವಡ್ಡರಹಳ್ಳಿ ಪಾಳ್ಯದ ಯುವಕ ಕುಮಾರಸ್ವಾಮಿ ಬಂಧಿತ ಆರೋಪಿ.

ಕುಮಾರಸ್ವಾಮಿ ಪ್ರತಿದಿನ ಕಾಲ್, ಮೆಸೆಜ್ ಮಾಡಿ ಪಲ್ಲವಿಗೆ ಪ್ರೀತಿಸುವಂತೆ ಕಾಟ ಕೊಡುತ್ತಿದ್ದ. ಅಷ್ಟೇ ಅಲ್ಲದೇ ಆಕೆಯನ್ನು ಫಾಲೋ ಮಾಡುವುದು, ಆಕೆಯ ಮನೆ ಬಳಿ ಬಂದು ಗಲಾಟೆ ಮಾಡುವುದು ಮಾಡುತ್ತಿದ್ದ ಎಂಬ ಆರೋಪ ಕೇಳಿ ಬಂದಿದೆ. ಇದರಿಂದ ಮನನೊಂದು ಪಲ್ಲವಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಘಟನೆಗೆ ಸಂಬಂಧಿಸಿದಂತೆ ಕುಮಾರಸ್ವಾಮಿ ವಿರುದ್ಧ ಮೃತ ಚೈತ್ರಾ ಪೋಷಕರು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನಲ್ಲಿ ಕಳೆದ ಹಲವು ವರ್ಷಗಳಿಂದ ಕುಮಾರಸ್ವಾಮಿ ಪಲ್ಲವಿಗೆ ಕಿರುಕುಳ ನೀಡುತ್ತಿದ್ದನಂತೆ. ಕಿರುಕುಳದಿಂದಲೇ ನಮ್ಮ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆರೋಪಿಸಿದ್ದಾರೆ.

ಸದ್ಯ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಆರೋಪಿ ಕುಮಾರಸ್ವಾಮಿಯನ್ನ ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.