ಪ್ರೇಯಸಿಯನ್ನು ಕೊಂದ ಪಾಗಲ್ ಪ್ರೇಮಿ ಸಾವು…

97
firstsuddi

ಉಡುಪಿ : ಪ್ರೇಯಸಿಗೆ ಚೂರಿ ಇರಿದು ಬಳಿಕ ತಾನೂ ಕೂಡ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಮೃತಪಟ್ಟಿದ್ದಾನೆ. ಮೃತಪಟ್ಟ ಯುವಕನನ್ನು ಅಲೆವೂರು ರಾಂಪುರ ನಿವಾಸಿ ಸಂದೇಶ್ ಕುಲಾಲ್(26) ಎಂದು ಗುರುತಿಸಲಾಗಿದೆ

ಮೃತ ಯುವಕ ಸಂದೇಶ್ ಕುಲಾಲ್ ಮತ್ತು ಅಂಬಾಗಿಲು ಸಮೀಪದ ಸೌಮಶ್ರೀ ಭಂಡಾರಿ ಕಳೆದ ಏಳೆಂಟು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಕೆಲ ದಿನಗಳ ಹಿಂದೆ ಸೌಮ್ಯಶ್ರೀಗೆ ಬೇರೆಯವರೊಂದಿಗೆ ನಿಶ್ಚಿತಾರ್ಥ ಆಗಿತ್ತೆಂದು ತಿಳಿದುಬಂದಿದೆ. ಇದರಿಂದ ಸಂದೇಶ ಕುಲಾಲ್ ಕುಪಿತಗೊಂಡಿದ್ದು, ಇದೇ ವಿಚಾರದಲ್ಲಿ ಇಬ್ಬರಿಗೂ ಜಗಳ ಆಗುತ್ತಿತ್ತು ಎಂದು ಪೊಲೀಸ್ ಮೂಲ ಗಳು ತಿಳಿಸಿವೆ.

ಬ್ಯಾಂಕಿನಿಂದ ಆಕೆ ಮನೆಗೆ ವಾಪಸ್ ಆಗುತ್ತಿದ್ದ ಸಂದರ್ಭ ಯುವಕ ಸಂತೆಕಟ್ಟೆ ರಾಷ್ಟ್ರೀಯ ಹೆದ್ದಾರಿ ಬಳಿ ಅಡ್ಡಗಟ್ಟಿ ನಿಂತಿದ್ದಾನೆ. ಯುವತಿಯ ಜೊತೆ ವಾಗ್ವಾದ ನಡೆದಿತ್ತು ಎನ್ನಲಾಗಿದೆ. ಜಗಳ ಮುಂದುವರೆದು ಯುವಕ ಯುವತಿಗೆ ಚಾಕುವಿನಿಂದ ಇರಿದಿದ್ದಾನೆ. ದ್ವಿಚಕ್ರವಾಹನ ದಿಂದ ಯುವತಿ ಕೆಳಗೆ ಬಿದ್ದಿದ್ದಾಳೆ. ಪಾಗಲ್ ಪ್ರೇಮಿಯೂ ನಂತರ ಅದೇ ಚಾಕುವಿನಿಂದ ಕುತ್ತಿಗೆ ಕೊಯ್ದುಕೊಂಡಿದ್ದಾನೆ.

ಗಂಭೀರ ಗಾಯಗೊಂಡ ಯುವತಿ ಹಾಗೂ ಯುವಕ ಸಂದೇಶ್ ಕುಲಾಲ್ ನನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು ಯುವತಿ ಅತೀವ ರಕ್ತಸ್ರಾವದಿಂದ ನಿನ್ನೆ ರಾತ್ರಿ ಮೃತಪಟ್ಟಿದ್ದು ಯುವಕ ಸಂದೇಶ್ ಕುಲಾಲ್ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಬೆಳಿಗ್ಗೆ ಮೃತಪಟ್ಟಿದ್ದಾನೆ ಎಂದು ಉಡುಪಿ ಎಸ್ಪಿ ವಿಷ್ಣುವರ್ಧನ್ ತಿಳಿಸಿದ್ದಾರೆ.

ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.