ಫೆ.22ರವರೆಗೆ ಶಾಲಾ-ಕಾಲೇಜುಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿ : ಕಮಲ್ ಪಂತ್.

74
firstsuddi

ಬೆಂಗಳೂರು : ಹಿಜಾಬ್-ಕೇಸರಿ ವಿವಾದ ಹಿನ್ನಲೆ ಇಂದಿನಿಂದ ಫೆಬ್ರವರಿ.22ರವರೆಗೆ ನಿಷೇಧಾಜ್ಞೆ ಜಾರಿ ಮಾಡಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು ಆದೇಶಿಸಿದ್ದಾರೆ.

ನಗರದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತ ಕ್ರಮವಾಗಿ ನಗರದಲ್ಲಿರುವ ಶಾಲಾ ಕಾಲೇಜ್, ಶಿಕ್ಷಣ ಸಂಸ್ಥೆಗಳ ಗೇಟ್ ನಿಂದ 200 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಸಭೆ ಸಮಾರಂಭ, ಪ್ರತಿಭಟನೆ ಮಾಡದಂತೆ ನಿಷೇಧಿಸಲಾಗಿದೆ. ಒಂದು ವೇಳೆ ಕಾನೂನು ಉಲ್ಲಂಘನೆ ಕಂಡುಬಂದರೆ ಕ್ರಮ ಕೈಗೊಳ್ಳಲಾಗುವುದು ಎಂದು ಆಯುಕ್ತರು ತಿಳಿಸಿದ್ದಾರೆ.