ಫೋಟೋಗೆ ಪೋಸ್ ಕೊಡಲು ಹೋಗಿ ವ್ಯಕ್ತಿ ನೀರುಪಾಲು…

77
firstsuddi

ಕಾರವಾರ : ಫೋಟೋಗೆ ಪೋಸ್ ಕೊಡಲು ಹೋಗಿ ಪ್ರವಾಸಿಗನೋರ್ವ ಸಮುದ್ರ ಪಾಲಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾದ ವನ್ನಳ್ಳಿ ಕಡಲ ತೀರದಲ್ಲಿ ನಡೆದಿದೆ.

ಸಮುದ್ರ ಪಾಲಾದ ವ್ಯಕ್ತಿಯನ್ನು ಶಿರಸಿಯ ನಿವಾಸಿ 42 ವರ್ಷದ ಸುಬ್ಬುಗೌಡ ಎಂದು ಗುರುತಿಸಲಾಗಿದೆ. ಸುಬ್ಬುಗೌಡ ಸ್ನೇಹಿತರ ಜತೆಗೆ ಪ್ರವಾಸಕ್ಕೆಂದು ಕುಮಟಾದ ವನ್ನಳ್ಳಿ ಸಮುದ್ರ ತೀರಕ್ಕೆ ಬಂದಿದ್ದರು. ಈ ವೇಳೆ ಕಡಲ ತೀರದ ಬಂಡೆ ಮೇಲೆ ಕುಳಿತು ಫೋಟೋಗೆ ಪೋಸ್ ಕೊಡುತ್ತಿದ್ದಾಗ ರಭಸವಾಗಿ ಬಂದ ಅಲೆಯಲ್ಲಿ ಕೊಚ್ಚಿ ಹೋಗಿದ್ದಾರೆ. ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.