ಫೋನ್ ಕದ್ದಾಲಿಕೆ ಬಗ್ಗೆ ತನಿಖೆಯಾಗಲಿ : ಸಿದ್ದರಾಮಯ್ಯ.

90
Firstsuddi

ಬೆಂಗಳೂರು : ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯನವರು ಭ್ರಷ್ಟಾಚಾರದ ಬಗ್ಗೆ ಬಿಜೆಪಿ ಪಕ್ಷದವರೇ ಗಂಭೀರ ಆರೋಪ ಮಾಡಿರುವುದರಿಂದ ರಾಜ್ಯಪಾಲರು ಕೂಡಲೇ ಕೇಂದ್ರಕ್ಕೆ ಪತ್ರ ಬರೆದು ರಾಜ್ಯ ಸರ್ಕಾರವನ್ನು ವಜಾ ಮಾಡಲು ಶಿಫಾರಸ್ಸು ಮಾಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯನವರು ಆಗ್ರಹಿಸಿದ್ದಾರೆ.

ಬಿಜೆಪಿಯಲ್ಲಿ ಕುರ್ಚಿಗೆ ಕಚ್ಚಾಟ ನಡೀತಿದೆ. ಆಡಳಿತ ಕುಸಿದಿದೆ, ಲೀಡರ್ ಇಲ್ಲ, ಸರ್ಕಾರ ಇಲ್ಲ, ರಾಜ್ಯ ದಿವಾಳಿ ಆಗಿದೆ. ಭ್ರಷ್ಟಾಚಾರ ವ್ಯಾಪಕ ಆಗಿದೆ ಅಂತ ಅವರ ಪಕ್ಷದವರೇ ಹೇಳುತ್ತಿದ್ದಾರೆ. ರಾಜ್ಯಾದ್ಯಂತ ಭ್ರಷ್ಟಾಚಾರದ ವಾಸನೆ ಹೊಡಿತೀದೆ ಅಂತ ಅವರ ಪಕ್ಷದವರೇ ಹೇಳಿದ್ದಾರೆ. ಫೋನ್ ಕದ್ದಾಲಿಕೆ ಬಗ್ಗೆ ತನಿಖೆ ಆಗಲಿ, ಬೆಲ್ಲದ್ ಬಹಿರಂಗವಾಗಿ ಹೇಳಿದ್ದಾರೆ, ಎಲ್ಲದರ ತನಿಖೆ ನಡೆಯಬೇಕು ಎಂದು ತಿಳಿಸಿದರು.

ಇದೇ ವೇಳೆ ಹೆಚ್. ವಿಶ್ವನಾಥ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿದ್ದರಾಮಯ್ಯ, ಆ ಬಗ್ಗೆ ಮಾತನಾಡಲ್ಲ ಎಂದರು.