ಮೈಸೂರು : ತಾಯಿ ಫೋನ್ ಹೆಚ್ಚು ಬಳಸಬೇಡ ಎಂದಿದ್ದಕ್ಕೆ ಯುವತಿ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಎನ್.ಆರ್. ಮೊಹಲ್ಲಾದ ಶಿವಾಜಿ ರಸ್ತೆಯಲ್ಲಿ ನಡೆದಿದೆ. ನಿಕಾನ್(19) ಆತ್ಮಹತ್ಯೆಗೆ ಶರಣಾದ ಯುವತಿ ಎಂದು ಗುರುತಿಸಲಾಗಿದೆ. ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ಯುವತಿ ನಿಕಾನ್ ಹೆಚ್ಚಾಗಿ ಫೋನ್ ಬಳಸುತ್ತಿದ್ದರು. ಇದರಿಂದ ತಾಯಿ ಯುವತಿಗೆ ಹೆಚ್ಚು ಫೋನ್ ಬಳಸಬೇಡ ಎಂದು ಬುದ್ಧಿವಾದ ಹೇಳಿದ್ದಾರೆ. ಇದರಿಂದ ಮನನೊಂದ ಯುವತಿ ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ನರಸಿಂಹರಾಜ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.










